

ವಿಜಯವಾಣಿ ಸುದ್ದಿಜಾಲ ಗದಗ
ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಪಾತ್ರ ಮಹತ್ವದ್ದಾಗಿದೆ ಎಂದು ನಿವೃತ್ತ ಎಸ್ಪಿ ಟಿ. ೈಜುದ್ದೀನ್ ಹೇಳಿದರು.
ಜಿಲ್ಲಾ ಪೋಲಿಸ್ ಇಲಾಖೆಯಿಂದ ಮಂಗಳವಾರ ಜಿಲ್ಲಾ ಸಶಸ್ತ್ರ ಪೋಲಿಸ್ ಟಕ ಮೈದಾನದಲ್ಲಿ ಆಯೋಜಿಸಿದ್ದ ಪೋಲಿಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇಲಾಖೆಯಲ್ಲಿ ಪ್ರತಿ ದಿನ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಎಲ್ಲ ನೌಕರರು ಮಾನಸಿಕ ಹಾಗೂ ದೈಹಿಕ ಸದೃಢವಾಗಿರುವುದು ಅವಶ್ಯಕವಾಗಿದೆ. ಪೊಲೀಸ್ ಇಲಾಖೆ ಹಾಗೂ ಮೇಲಾಧಿಕಾರಿಗಳಿಗೆ ಇನ್ನೂ ಹೆಚ್ಚಿನ ಗೌರವ ತರುವ ಕಾರ್ಯ ಮಾಡಬೇಕೆಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ. ಎಸ್. ನೇಮಗೌಡ ಮಾತನಾಡಿ, ಹಗಲು&ರಾತ್ರಿ ಎನ್ನದೇ ಕಾನೂನು ಸುವ್ಯವಸ್ಥೆ ಹಾಗೂ ಶಾಂತತೆ ಕಾಪಾಡಲು ಪೊಲೀಸ್ ಸಿಬ್ಬಂದಿಯವರು ಸದಾ ಕಾರ್ಯ ನಿರತರಾಗಿರುತ್ತಾರೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಅಧಿಕಾರಿ ಹಾಗೂ ಸಿಬ್ಬಂದಿಯವರನ್ನು ಈ ಸಮಯದಲ್ಲಿ ಸ್ಮರಿಸಿಕೊಳ್ಳಲು ಹಾಗೂ ನಿವೃತ್ತಿ ನಂತರ ಅವರಿಗೆ ಉತ್ತೇಜನ ನೀಡಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರತಿ ವರ್ಷ ಪೊಲೀಸ ಧ್ವಜ ದಿನಾಚರಣೆ ಸಂದರ್ಭದಲ್ಲಿ ಪೊಲೀಸ್ ಧ್ವಜಗಳನ್ನು ಮಾರಾಟ ಮಾಡಿ, ಅದರಿಂದ ಬಂದ ಹಣದಲ್ಲಿ ಶೇಕಡಾ ಶೇ. 50 ರಷ್ಟು ಹಣವನ್ನು ನಿವೃತ್ತ ಪೊಲೀಸ್ ಅಧಿಕಾರಿಗಳ ೇಮ ನಿಧಿಗೆ ಮತ್ತು ಶೇ. 50 ರಷ್ಟು ಹಣವನ್ನು ಕೇಂದ್ರ ನಿವೃತ್ತ ಪೊಲೀಸ್ ಕಲ್ಯಾಣ ನಿಧಿಗೆ ಜಮಾ ಮಾಡಿ ಈ ನಿಧಿಯನ್ನು ಸೇವೆಯಲ್ಲಿರುವ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ವೈದ್ಯಕಿಯ ಚಿಕಿತ್ಸಾ ವೆಚ್ಚ ಮಂಜೂರಿಸುವ ಸಲುವಾಗಿ ವಿನಿಯೋಗಿಸಲಾಗುತ್ತದೆ. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲೆಯ ನಿವೃತ್ತ ಪೊಲೀಸ್ ಅಧಿಕಾರಿಗಳ ೇಮ ನಿಧಿ ಸಮಿತಿ ಸಭೆ ಕರೆದು ಸದರಿ ಸಭೆಗಳಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯವರ ಕುಂದುಕೊರತೆಗಳನ್ನು ಆಲಿಸಿ, ಕುಂದುಕೊರತೆ ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯವರು ಕ್ಯಾಂಟೀನ್ ಉಪಯೋಗ ಪಡೆಯುತ್ತಿದ್ದು, ಈ ಸದುಪಯೋಗವನ್ನು ನಿವೃತ್ತ ಪೊಲೀಸ್ ಅಧಿಕಾರಿ ಯವರುಗಳೂ ಸಹ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸೇವಾ ನಿವೃತ್ತರಿಗೆ ಗೌರವ ಸಮರ್ಪಣೆ ಮಾಡಲಾಯಿತು. ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಎಂ. ಬಿ. ಸಂಕದ ,ಡಿಎಸ್ಪಿ ಡಿ. ಬಿ. ಇನಾಮದಾರ, ಡಿ.ಎಸ್ಪಿ ಡಿ. ಎಸ್ ಧನಗರ, ಪ್ರಭುಗೌಡ ಕಿರೆದಳ್ಳಿ, ಎಂ. ಟಿ. ಭಟ್ ಇತರರು ಇದ್ದರು.
ಬಾಕ್ಸ್:
ಪ್ರಸಕ್ತ ವರ್ಷ ನಿವೃತ್ತ ಪೊಲೀಸ್ ಅಧಿಕಾರಿಗಳ ೇಮನಿಧಿಯಿಂದ 39 ಜನ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಯವರಿಗೆ 1.27 ಲಕ್ಷ ವೈದ್ಯಕಿಯ ಧನ ಸಹಾಯ ಪಾವತಿಸಲಾಗಿದೆ ಮತ್ತು ಮರಣ ಹೊಂದಿದ 22 ಜನ ನಿವೃತ್ತ ಪೊಲೀಸ್ ಅಧಿಕಾರಿಗಳ ಅಂತ್ಯಸಂಸ್ಕಾರಕ್ಕೆ 2.20 ಲಕ್ಷ ನೀಡಿಲಾಗಿದೆ ಎಂದು ಬಿ.ಎಸ್.ನೇಮಗೌಡ ತಿಳಿಸಿದರು.