ಲಾರಿ ಡಿಕ್ಕಿ ಪೊಲೀಸ್ ಗೆ ಗಾಯ

accident-15
Published on

ಚನ್ನಪಟ್ಟಣ

ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ

ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೈವೇಯ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್  ಕಾನ್ಸ್ ಸ್ಟೇಬಲ್ ಒಬ್ಬರು ಗಂಭೀರವಾಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ತಿಟ್ಟಮಾರನಹಳ್ಳಿ ಬಳಿಯ ಎಕ್ಸ್ಪ್ರೆಸ್ ಹೈವೇಯಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.

ಅಕ್ಕೂರು ಪೊಲೀಸ್ ಠಾಣೆಯ ಮುಖ್ಯ ಪೇದೆ ಸೈಯದ್ ನಾಸಿರ್ ಪಾಷಾ ಗಾಯಗೊಂಡಿರುವ ಪೇದೆ. ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಮನಗರ ಜಿಲ್ಲಾ ಪೊಲೀಸ್ ಘಟಕದ ಹೈವೇ ಪೆಟ್ರೋಲ್ ವಾಹನದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಈ ಘಟನೆ ನಡೆದಿದೆ.

ಹೆದ್ದಾರಿಯಲ್ಲಿ ಪಾರ್ಕಿಂಗ್ ಮಾಡಿದ್ದ ಲಾರಿಯೊಂದನ್ನು ತೆರವುಗೊಳಿಸುವ ವೇಳೆ ಹಿಂದಿನಿಂದ ಬಂದ ಮತ್ತೊಂದು ಲಾರಿ ಗುದ್ದಿ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಪಾಷಾಗೆ ತಲೆ ಸೇರಿದಂತೆ ಇತರೆ ಕಡೆ ಭಾಗಗಳಲ್ಲಿ ಗಂಭೀರವಾದ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಮ ನಿಮಾನ್ಸ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಘಟನೆ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net