

ಬೆಂಗಳೂರು: ಯುವತಿಯೊಬ್ಬಳ ಜತೆ ಅನುಚಿತವಾಗಿ ವರ್ತಸಿದ್ದ ಪೊಲೀಸ್ ಅಧಿಕಾರಿಯನ್ನು ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರಿನ ಕೆ.ಪಿ. ಅಗ್ರಹಾರದ ಪೊಲೀಸ್ ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಗೌಡ ಅಮಾನತುಗೊಂಡವರು.
ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಗೌಡ ಹೋಟೆಲ್ಗೆ ಹೋಗಿದ್ದಾಗ ಅಲ್ಲಿ ಪಾನಮತ್ತರಾಗಿ ಯುವತಿಯೊಬ್ಬಳ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಮೇರೆಗೆ ಈ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗd ಡಿಸಿಪಿ ಲಕ್ಷ್ಮಣ್ ನಿಂಬರಗಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ರಾಜಧಾನಿಯ ಜೀವನ್ಬಿಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನೊಂದ ಯುವತಿ ಈ ಠಾಣೆಗೆ ದೂರು ನೀಡಿದ್ದಳು. ಯುವತಿಯ ದೂರಿನಮತೆ ಜೀವನ್ಬಿಮಾನಗರ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ಇನ್ಸ್ಪೆಕ್ಟರ್ ಅಮಾನತುಗೊಂಡಿದ್ದಾರೆ.