ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ಸುಳ್ಳೆಂದ ಪೊಲೀಸರು

Crime
Published on

ಮಂಗಳೂರು: ಉಳ್ಳಾಲದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಯತ್ನ ನಡೆದಿದೆ ಎಂಬುದು ಸುಳ್ಳು ಸುದ್ದಿ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.


ಉಚ್ಚಿಲ ಜಾಲ ಹಿತ್ತಿಲು ನಿವಾಸಿ ಕಿಶೋರ್ ಸಾಲ್ಯಾನ್(49) ಎಂಬುವರ ಮೇಲೆ ತಲವಾರು ದಾಳಿ ನಡೆಯಲು ಪ್ರಯತ್ನ ನಡೆದಿದ್ದು, ಆ ವ್ಯಕ್ತಿ ತಪ್ಪಿಸಿಕೊಂಡು ಅಪಾಯದಿಂದ ಪಾರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತು. ಇದರಿಂದ ಜನರು ಕೂಡ ಗಲಿಬಿಲಿಗೊಂಡಿದ್ದರು. ವಿಷಯ ತಿಳಿದ ಪೊಲೀಸ್ ಕಮಿಷನರ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಅವರಿಂದ ಮಾಹಿತಿ ಪಡೆದರು.


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ಬೆಳಿಗ್ಗೆ ಉಳ್ಳಾಲದಲ್ಲಿ ಮಚ್ಚು, ಲಾಂಗು ಬಳಸಿ ಹಲ್ಲೆ ಮಾಡಲಾಗಿದೆ ಎಂಬ ಸುದ್ದಿ ಹರಿದಾಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ವೇಳೆ ಸುಳ್ಳು ಸುದ್ದಿ ಎಂದು ತಿಳಿದು ಬಂದಿದೆ. ಕಿಶೋರ್ ಸಾಲ್ಯಾನ್ ಅವರನ್ನು ಕರೆಸಿ ಪರಿಶೀಲನೆ ಮಾಡಲಾಗುತ್ತಿದೆ. ಆತಂಕದಿಂದ ತಾನು ಹಾಗೆ ಹೇಳಿರುವುದಾಗಿ ಅವರು ಹೇಳಿಕೆ ನೀಡಿದ್ದಾನೆ. ಸ್ಥಳೀಯರೊಂದಿಗೂ ಚರ್ಚಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net