ಹುತಾತ್ಮ ಪೊಲೀಸರ ತ್ಯಾಗ, ಬಲಿದಾನ ಸ್ಮರಣೀಯ

21 Dwd 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ವ್ಯವಸ್ಥೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಪೊಲೀಸ್ ಅಽಕಾರಿ, ಸಿಬ್ಬಂದಿಯ ತ್ಯಾಗ, ಬಲಿದಾನವನ್ನು ಸ್ಮರಿಸುವುದು ಮತ್ತು ಹುತಾತ್ಮ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಗೆ ಬೆಂಬಲ, ಸಹಕಾರ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಹೇಳಿದರು.

ನಗರದ ಪೊಲೀಸ್ ಹೆಡ್ ಕ್ವಾಟರ್ಸ್ದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾಗರಿಕ ಹಕ್ಕುಗಳನ್ನು ಕಾಪಾಡಲು ತಮ್ಮನ್ನು ಕರ್ತವ್ಯದ ಮೂಲಕ ಅರ್ಪಿಸಿಕೊಂಡಿರುವ ಆರಕ್ಷಕರನ್ನು ಗೌರವ, ಹೆಮ್ಮೆಯಿಂದ ಕಾಣಬೇಕು. ಸಮಾಜ ಮತ್ತು ಸರ್ಕಾರದ ಆಡಳಿತದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸವ್ಯವಸ್ಥೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಸಮಾಜದ ಸಂರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆಯಲ್ಲಿ ಅನೇಕರು ಪ್ರಾಣ ತ್ಯಾಗ ಹಾಗೂ ದೈಹಿಕವಾಗಿ ಊನರಾಗಿದ್ದಾರೆ. ಪೊಲೀಸ್ ವ್ಯವಸ್ಯೆ ಸುಧಾರಣೆ, ಮೂಲಸೌಕರ್ಯ ಪೂರೈಸಲು ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಅನೇಕ ಸಮಿತಿಗಳು ಈ ಕುರಿತು ವರದಿ ಸಲ್ಲಿಸಿವೆ. ಸರ್ಕಾರ ಸದಾಕಾಲ ಪೊಲೀಸರೊಂದಿಗೆ ಇರುತ್ತದೆ ಎಂದರು.

ವಿಶೇಷ ಆಹ್ವಾನಿತರಾಗಿದ್ದ ಧಾರವಾಡ ಐಐಟಿ ನಿರ್ದೇಶಕ ಪ್ರೊ. ವೆಂಕಪ್ಪಯ್ಯ ದೇಸಾಯಿ ಮಾತನಾಡಿ, ಪ್ರಾಮಾಣಿಕ ಸೇವೆ ಸಲ್ಲಿಸುವುದು ಎಲ್ಲ ನಾಗರಿಕರ ಜವಾಬ್ದಾರಿ ಆಗಿದೆ. ಸಮಾಜದ ರಕ್ಷಣೆ, ಶಾಂತಿ ಕಾಪಾಡುವುದು ಬರೀ ಪೊಲೀಸ್ ಅಕಾರಿಗಳ, ಸಿಬ್ಬಂದಿಯ ಹೊಣೆಗಾರಿಕೆ ಆಗಬಾರದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಪೊಲೀಸ್ ಹುತಾತ್ಮರ ನಾಮಸ್ಮರಣೆ ಮಾಡಿದರು.

ಅತಿಥಿಗಳು, ಗಣ್ಯರು ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಪುಷ್ಪನಮನ ಸಮರ್ಪಿಸಿದರು. ಪರೇಡ್ ಕಮಾಂಡರ್ ವಿಠ್ಠಲ ಆರೇರ ನೇತೃತ್ವದಲ್ಲಿ ಎಸ್. ಕುರಗೋಡ ಮತ್ತು ಜಿ.ಎಲ್. ಜಂಜೂರಿ ಅವರ ಡಿಎಆರ್ ಪೊಲೀಸ್ ತಂಡಗಳಿ0ದ ಗೌರವ ಸಮರ್ಪಣೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net