

ಧಾರವಾಡ; ಜಿಲ್ಲಾ ಪೊಲೀಸ್ ಇಲಾಖೆಯಿಂದ ಅ. 21ರಂದು ಬೆಳಗ್ಗೆ 8 ಗಂಟೆಗೆ ಸಶಸ್ತ್ರ ಮೀಸಲು ಪಡೆ ಕೇಂದ್ರ ಸ್ಥಾನದಲ್ಲಿರುವ ಹುತಾತ್ಮರ ಸ್ಮಾರಕ ಆವರಣದಲ್ಲಿ ಪೊಲೀಸ್ ಹುತಾತ್ಮರ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ.
ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಜಿ.ರಮಾ, ವಿಶೇಷ ಆಹ್ವಾನಿತರಾಗಿ ಐಐಟಿ ಡೀನ್ ಪ್ರೊ. ಎಂ.ಎಸ್. ಶಿವಪ್ರಸಾದ ಆಗಮಿಸುವರು. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.