ಹುತಾತ್ಮರ ತ್ಯಾಗದಿಂದ ದೇಶದ ಅಖಂಡತೆ ಉಳಿವು

udp-21-police
Published on

ಉಡುಪಿ: ದೇಶದ ಅಖಂಡತೆ ಮತ್ತು ಸಾರ್ವಭೌಮತೆ ಕಾಪಾಡಲು ಹುತಾತ್ಮರ ತ್ಯಾಗ ಮತ್ತು ಬಲಿದಾನಗಳು ಕಾರಣವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕಿರಣ್​.ಎಸ್​ ಗಂಗಣ್ಣನವರ್​ ಹೇಳಿದರು.

ಸೋಮವಾರ ಜಿಲ್ಲಾ ಪೊಲೀಸ್​ ಇಲಾಖೆ ವತಿಯಿಂದ ಸಶಸ್ತ್ರ ಘಟಕದ ಮೈದಾನದಲ್ಲಿ ಪೊಲೀಸ್​ ಹುತಾತ್ಮ ದಿನಾಚರಣೆ ಅಂಗವಾಗಿ ಹುತಾತ್ಮ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿ ಮಾತನಾಡಿದರು.

ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಬಲಿಕೊಟ್ಟ ಹುತಾತ್ಮರ ಬಲಿದಾನಗಳನ್ನು ನೆನಪಿಸಿಕೊಳ್ಳುವುದು ನಾಗರಿಕರ ಕರ್ತವ್ಯ. ಈ ಮೂಲಕ ದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗುವಂತಾಗಬೇಕು. ದೇಶ ಕಟ್ಟುವಲ್ಲಿ ಪ್ರತಿಯೊಬ್ಬರು ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ಅರುಣ್​ ಕೆ. ಮಾತನಾಡಿ, ಕಳೆದ ಒಂದು ವರ್ಷದಲ್ಲಿ ಕರ್ನಾಟಕದ ಐದು ಮಂದಿ ಅಧಿಕಾರಿಗಳು ಮತ್ತು ಸಿಬಂದಿ ಸೇರಿ ದೇಶದಲ್ಲಿ ಒಟ್ಟು 216 ಜನ ಪೊಲೀಸ್​ ಅಧಿಕಾರಿಗಳು ಹಾಗೂ ಸಿಬಂದಿ ಕರ್ತವ್ಯದ ವೇಳೆ ಪ್ರಾಣಾರ್ಪಣೆ ಮಾಡಿದ್ದಾರೆ ಎಂದರು.
ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಕರಾವಳಿ ಕಾವಲು ಪೊಲೀಸ್​ ಪಡೆಯ ವರಿಷ್ಠಾಧಿಕಾರಿ ಮಿಥುನ್​ ಎಚ್​.ಎನ್​., ಹೆಚ್ಚುವರಿ ಪೊಲೀಸ್​ ವರಿಷ್ಠಾಧಿಕಾರಿಗಳಾದ ಎಸ್​.ಟಿ. ಸಿದ್ದಲಿಂಗಪ್ಪ, ಪಿ.ಎ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net