ಮಹಿಳೆಗೆ ಕಿರುಕುಳ ನೀಡಿದ ಪೊಲೀಸ್ ಸಿಬ್ಬಂದಿ ಅಮಾನತು

New Project (44)
Published on

ಮೂಡುಬಿದಿರೆ: ಇಲ್ಲಿನ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಆ ಬಳಿಕ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬನನ್ನು ಅಮಾನತುಗೊಳಿಸಲಾಗಿದೆ.

ಕೊಪ್ಪಳ ಮೂಲದ ಮೂಡುಬಿದಿರೆಯ ಪೊಲೀಸ್ ಸಿಬ್ಬಂದಿ ಶಾಂತಪ್ಪ ಎಂಬಾತ ಮಹಿಳೆಗೆ ಕಿರುಕುಳ ನೀಡಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕೆಲವು ದಿನಗಳ ಹಿಂದೆ ಮಹಿಳೆಯೊಬ್ಬರು ಪ್ರಕರಣವೊಂದಕ್ಕೆ ಸಂಬಂಧಿಸಿ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದರು. ದೂರಿನ ಪ್ರತಿಯಲ್ಲಿ ಬರೆಯಲಾಗಿದ್ದ ಮಹಿಳೆಯ ನಂಬರ್ ತೆಗೆದು, ಆರೋಪಿ ಮಹಿಳೆಗೆ ಐದು ದಿನಗಳ ಕಾಲ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದ. ಈ ಕುರಿತು ಮಹಿಳೆ ಆತ ಮಾತನಾಡಿದ ಕಾಲ್ ರೆಕಾರ್ಡ್ ಸಹಿತ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೇಲಧಿಕಾರಿಗಳ ಆದೇಶದಂತೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net