

ಗುಂಡ್ಲುಪೇಟೆ: ಗಣೇಶ ಮೂರ್ತಿ ಮೆರವಣಿಗೆ ಹಾಗೂ ವಿಸರ್ಜನೆ ಸಮಯದಲ್ಲಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಗುರುವಾರ ಗುಂಡ್ಲುಪೇಟೆ ಪಟ್ಟಣದಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೆಲ ಕಿಡಿಗೇಡಿಗಳು ಬಳಸಿಕೊಂಡು ಸಮಾಜದ ಸ್ವಾಸ್ಥೃ ಹಾಳು ಮಾಡಲು ಯತ್ನಿಸುತ್ತಾರೆ.
ಆದ್ದರಿಂದ ಕಾರ್ಯಕ್ರಮ ಆಯೋಜಕರು ಜಾಗರೂಕರಾಗಿ ಕಾರ್ಯಕ್ರಮ ನಡೆಸಬೇಕು. ಪೊಲೀಸ್ ಇಲಾಖೆ ಸಹಕಾರ ಪಡೆದು ಮೆರವಣಿಗೆ ನಡೆಸಬೇಕು. ನಂತರ ಈದ್ ಮಿಲಾದ್ ಹಬ್ಬದ ಸಮಯದಲ್ಲೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದರು.