

ವಿಜಯಪುರ : ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ನಿಮಿತ್ತ ಪಟ್ಟಣದಲ್ಲಿ ಭಾನುವಾರ ಡಿವೈಎಸ್ಪಿ ಟಿ.ಎಸ್. ಸುಲ್ಪಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಪೊಲೀಸ್ ಠಾಣೆಯಿಂದ ಆರಂಭಗೊಂಡ ಪಥ ಸಂಚಲನ ಸಂಗೊಳ್ಳಿ ರಾಯಣ್ಣ ಸರ್ಕಲ್, ಪ.ಪಂ. ಕಾರ್ಯಾಲಯ, ಶಿವಾಜಿ ಸರ್ಕಲ್, ಡಾ. ಅಬ್ದುಲ್ ಕಲಾಂ ಸರ್ಕಲ್, ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್, ಕಿತ್ತೂರ ಚನ್ನಮ್ಮ ಸರ್ಕಲ್ಗಳಲ್ಲಿ ಸಂಚರಿಸಿ ಮರಳಿ ಪೊಲೀಸ್ ಠಾಣೆಗೆ ಆಗಮಿಸಿತು. ಸಿಪಿಐ ರಮೇಶ ಅವಜಿ, ಪಿಎಸ್ಐ ಶ್ರೀಕಾಂತ ಕಾಂಬಳೆ, ಪಿಎಸ್ಐ ಎಸ್.ಸಿ. ಗುರುಬೆಟ್ಟ ಸೇರದಂತೆ 70 ಜನ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.
ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮನಗೂಳಿ ಪಟ್ಟಣದಲ್ಲಿ ಪೊಲೀಸ್ ಸಿಬ್ಬಂದಿ ಪಥ ಸಂಚಲನ ನಡೆಸಿದರು.