

ಹುಬ್ಬಳ್ಳಿ: ಹು-ಧಾ ಅವಳಿ ನಗರದಲ್ಲಿ ಅಕ್ರಮ ಚಟುವಟಿಕೆ ಹಾಗೂ ಅಪರಾಧ ಕೃತ್ಯ ತಡೆಗಟ್ಟುವ ನಿಟ್ಟಿನಲ್ಲಿ ಹು-ಧಾ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ರೌಡಿಶೀಟರ್‌ಗಳಿಗೆ ಪೊಲೀಸರು ಬಿಸಿ ಮುಟ್ಟಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ವಿದ್ಯಾನಗರದ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್‌ಗಳ ಮನೆಗಳ ಮೇಲೆ ಪೊಲೀಸ್ ಇನ್‌ಸ್ಪೆಕ್ಟರ್ ಡಿ.ಕೆ. ಪಾಟೀಲ ನೇತೃತ್ವದಲ್ಲಿ ಪಿಎಸ್‌ಐ ಶ್ರೀಮಂತ ಹುಣಸಿಕಟ್ಟಿ ಹಾಗೂ ಸಿಬ್ಬಂದಿ ಭಾನುವಾರ ದಾಳಿ ನಡೆಸಿದರು.
ರೌಡಿಶೀಟರ್‌ಗಳ ದಿನಚರಿ, ಕುಟುಂಬದವರ ಮಾಹಿತಿ ಕಲೆ ಹಾಕಿದ ಪೊಲೀಸರು, ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾದರೆ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದರು.