ಮಟ್ಕಾ ಚೀಟಿ ವ್ಯವಹಾರ ನಡೆಸುತ್ತಿದ್ದಾಗ ದಾಳಿ

matka
Published on

ಬಂಟ್ವಾಳ: ಬಿ.ಸಿ.ರೋಡಿನ ಹೃದಯ ಭಾಗದಲ್ಲಿರುವ ಖಾಸಗಿ ಕಟ್ಟಡದ ತಳಭಾಗದಲ್ಲಿ, ಮಟ್ಕಾ ಚೀಟಿ ವ್ಯವಹಾರ ನಡೆಸುತ್ತಿದ್ದಾಗ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯ್ ಪ್ರಸಾದ್ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು ದಂಧೆಯಲ್ಲಿ ತೊಡಗಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಜೇಶ್ವರದ ಸಜೀತ್ ಕೆ.(38), ಮಂಗಳೂರು ಕಪಿತಾನಿಯೋ ಶಾಲೆ ಬಳಿಯ ವೀಶಾಲ್ ಸಿ.ಉಚ್ಚಿಲ್ (35), ಮಂಜೇಶ್ವರ ಬಡ್ಡ ಹಿತ್ತಲಿನ ಸುನೀಲ್ ಕುಮಾರ್ (39) ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net