

ಬೆಂಗಳೂರು : ಹೊಸ ವರ್ಷ ಆಚರಣೆ ಹತ್ತಿರವಾಗುತ್ತಿದಂತೆ ಪೊಲೀಸರು ಸಮಾಜಘಾತಕ ಶಕ್ತಿಗಳ ಮೇಲೆ ಹಿಡಿತ ಸಾಧಿಸುತ್ತಿದ್ದಾರೆ. ಸೋಮವಾರ ರಾತ್ರಿ ಪಶ್ಚಿಮ ವಿಭಾಗದ ಪೊಲೀಸರ ರೌಡಿಗಳ ಮನೆ ಹಾಗೂ ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಪಶ್ಚಿಮ ವಿಭಾಗದ ಪೊಲೀಸರು ಆಯಾ ಆಯಾ ಠಾಣಾ ವ್ಯಾಪ್ತಿಯಲ್ಲಿ ಇರುವ 155 ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಮಾರಕಾಸಗಳನ್ನು ಪರಿಶೀಲ ನಡೆಸಿದ್ದಾರೆ. ಜತೆಗೆ 148 ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.
ಪ್ರತಿದಿನ ಬರುವ ಗ್ರಾಹಕರ ಮೇಲೆ ನಿಗಾವಹಿಸಬೇಕು. ವರ್ಷಾಚರಣೆಗೆಂದು ವಿಶೇಷ ಕಾರ್ಯಕ್ರಮ ಆಯೋಜನೆ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು ಬಂದಾಗ ಮಾಹಿತಿ ನೀಡಬೇಕು. ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಬಾರ್, ರೆಸ್ಟೋರೆಂಟ್ ಮಾಲೀಕರು, ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದಾರೆ ಎಂದು ಪಶ್ಚಿಮ ವಿಭಾಗ ಡಿಸಿಪಿ ಡಾ.ಸಂಜೀವ್ ಎಂ. ಪಾಟೀಲ್ ತಿಳಿಸಿದ್ದಾರೆ.