ಪಿಓಪಿ ಗಣೇಶ ತಯಾರಿಸುತ್ತಿದ್ದ ಕೇಂದ್ರದ ಮೇಳೆ ಪೊಲೀಸರ ದಾಳಿ

police raided Pop Ganesha murthy preparing center
Published on

ರಾಮನಗರ: ನಿಮಯ ಮೀರಿ ಪಿಓಪಿ ಗಣಪತಿಗಳನ್ನು ಸಿದ್ದಪಡಿಸಿ ಮಾರಾಟ ಮಾಡುತ್ತಿದ್ದ ಕೇಂದ್ರದ ಮೇಳೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ರಾಮನಗರ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.

ಧಾರಾಪುರ ಬಳಿಯ ಘಟಕದಲ್ಲಿ ಕಾನೂನು ಬಾಹಿರವಾಗಿ ಪಿಓಪಿ ದೊಡ್ಡ ದೊಡ್ಡ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದರು. ಸುಮಾರು 70ಕ್ಕೂ ಹೆಚ್ಚು ಮೂರ್ತಿಗಳನ್ನು ತಯಾರು ಮಾಡಲಾಗಿತ್ತು ಎನ್ನಲಾಗಿದೆ. ಅಧಿಕಾರಿಗಳು ಮಾರಾಟಕ್ಕೆ ಸಿದ್ದವಾಗಿದ್ದ ಗಣೇಶಮೂರ್ತಿಗಳನ್ನು ವಶಕ್ಕೆ ಪಡೆದು ಘಟಕದ ಮಾಲೀಕ ನವೀನ್ ಎಂಬುವರ ವಿರುದ್ಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೇರಳ, ಆಂಧ್ರಪ್ರದೇಶ ಸೇರಿದಂತೆ ಹೊರ ರಾಜ್ಯದ ಕೆಲ ಭಾಗಗಳಿಗೆ ಧಾರಾಪುರ ಘಟಕದಿಂದ ಗಣೇಶಮೂರ್ತಿಗಳನ್ನು ತಯಾರಿಸಿ ಕಳಿಸಿ ಕೊಡಲಾಗುತ್ತಿತ್ತು ಎಂಬ ಮಾಹಿತಿ ಪೋಲೀಸರಿಗೆ ಸಿಕ್ಕಿದ್ದು ಘಟಕ ನಡೆಸುತ್ತಿದ್ದ ಮಾಲೀಕ ನವೀನ್‌ನನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಪರಿಸರ ಅಧಿಕಾರಿ ಸಿ.ಆರ್. ಮಂಜುನಾಥ್, ಸಿಬ್ಬಂದಿ ಮೀನಾಕ್ಷಿ,  ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಜಾರ್ಜ್ ಪ್ರಕಾಶ್ ಮತ್ತಿತರ ಅಧಿಕಾರಿಗಳು ಈ ದಾಳಿಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net