ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್

10 Dwd 6
Published on

ಧಾರವಾಡ: ನಗರದಲ್ಲಿ ಭಾನುವಾರ ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಹಾಗೂ ಅಽಕಾರಿಗಳು ಭದ್ರತೆಯನ್ನು ಪರಿಶೀಲಿಸಿದರು.

ಅ. 12ರಂದು ನಗರದ ಶಿವಾಜಿ ವೃತ್ತ ಬಳಿಯ ಕೆ.ಇ. ಬೋರ್ಡ್ಸ್ ಕಾಲೇಜು ಮೈದಾನದಿಂದ ಪಥಸಂಚಲನ ಹೊರಡಲಿದೆ. ಕಾಲೇಜಿಗೆ ಭೇಟಿ ನೀಡಿದ ಪೊಲೀಸ್ ಆಯುಕ್ತ, ಭದ್ರತೆಯನ್ನು ಪರಿಶೀಲಿಸಿದರು. ಪಥಸಂಚಲನ ಹೊರಡುವ 3 ಮಾರ್ಗಗಳಲ್ಲಿ ಸಂಚರಿಸಿದರು. ಪಥಸಂಚಲನ ಸಮಾವೇಶಗೊಳ್ಳುವ ಕೆಸಿಡಿ ಮೈದಾನದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಽಕಾರಿಗಳಿಗೆ ಸೂಚಿಸಿದರು.

ಪಥಸಂಚಲನ ಹೊರಡುವ ಮಾರ್ಗಗಳಲ್ಲಿ ಪೊಲೀಸ್ ಸಿಬ್ಬಂದಿ ರೂಟ್‌ಮಾರ್ಚ್ ನಡೆಸಿದರು. ಡಿಸಿಪಿಗಳಾದ ರವೀಶ ಸಿ.ಆರ್., ಮಹಾನಿಂಗ ನಂದಗಾವಿ ಹಾಗೂ ಇನ್‌ಸ್ಪೆಕ್ಟರ್‌ಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

ಈ ವೇಳೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಮಾತನಾಡಿ, ಪಥಸಂಚಲನದಲ್ಲಿ 8ರಿಂದ 10 ಸಾವಿರ ಜನ ಸೇರುವ ಅಂದಾಜಿದೆ. ಮುಂಜಾಗ್ರತಾ ಕ್ರಮವಾಗಿ ಭದ್ರತೆ ಮಾಡಲಾಗುವುದು. ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ವಿಜಯದಶಮಿ ಪಥಸಂಚಲನದಲ್ಲಿ ಸುಮಾರು 10 ಸಾವಿರ ಜನ ಸೇರಿದ್ದರು. ಹೀಗಾಗಿ ಧಾರವಾಡದಲ್ಲೂ ಜನ ಸೇರುವ ಅಂದಾಜಿದೆ. ಅಗತ್ಯ ಮುಂಜಾಗ್ರತಾ ಕ್ರಮವಾಗಿ ರೂಟ್ ಮಾರ್ಚ್ ನಡೆಸಲಾಗಿದೆ. ಪಥಸಂಚಲನ ಹಿನ್ನೆಲೆಯಲ್ಲಿ ಭಾನುವಾರ ಕೆಲ ಪ್ರದೇಶಗಳಲ್ಲಿ ವಾಹನ ಸಂಚಾರದ ಮಾರ್ಗ ಬದಲಾವಣೆ ಮಾಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net