

ಧಾರವಾಡ: ಸ್ವಾತಂತ್ರ‍್ಯೋತ್ಸವದ ಹುರುಪಿನಲ್ಲಿ ಕರ್ಕಶ ಶಬ್ದ ಮಾಡುತ್ತ ರ‍್ಯಾಲಿ ಮಾಡುತ್ತಿದ್ದ ೧೦ಕ್ಕೂ ಹೆಚ್ಚು ಬೈಕ್‌ಗಳನ್ನು ಸಂಚಾರಿ ಠಾಣೆ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಯುವಕರು ನಗರದ ಪ್ರಮುಖ ರಸ್ತೆಗಳಲ್ಲಿ ಕರ್ಕಶ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡು ಓಡಾಡುತ್ತಿದ್ದರು. ಸಂಚಾರಿ ಠಾಣೆ ಪೊಲೀಸರ ಗಮನಕ್ಕೆ ಬರುತ್ತಲೇ ಕಾರ್ಯಾಚರಣೆ ನಡೆಸಿ, ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕರ್ಕಶ ಶಬ್ದದ ಸೈಲೆನ್ಸರ್‌ಗಳನ್ನು ತೆಗೆದು ಹಾಕಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.