ಪೊಲೀಸ್ ಕ್ರೀಡಾಕೂಟ ಸಮಾರೋಪ,ಸಿಎಆರ್ ತಂಡಕ್ಕೆ ಚಾಂಪಿಯನ್ ಶಿಪ್

IMG-20231124-WA0021.jpg
Published on

ಹುಬ್ಬಳ್ಳಿ: ಇಲ್ಲಿಯ ಗೋಕುಲ ರಸ್ತೆ ಸಶಸ್ತ್ರ ಮೀಸಲು ಪಡೆ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ವತಿಯಿಂದ ಆಯೋಜಿಸಿದ್ದ ಮೂರು ದಿನಗಳ ವಾಷಿರ್ಕ ಕ್ರೀಡಾಕೂಟದಲ್ಲಿ ಸಿಎಆರ್ ತಂಡ ಚಾಂಪಿಯನ್ ಶಿಪ್ ಪಡೆದುಕೊಂಡಿದೆ.

ವೆಂಕಟೇಶ ನಾಯ್ಕ ಹಾಗೂ ರುಕ್ಮಿಣಿ ಅವರು ಪುರುಷರ ಹಾಗೂ ಮಹಿಳೆಯರ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಗೆದ್ದುಕೊಂಡರು.

ಸಿಎಆರ್ ವಿಭಾಗ, ಉತ್ತರ ವಿಭಾಗ, ದಕ್ಷಿಣ ವಿಭಾಗ, ಸಂಚಾರ ವಿಭಾಗ, ಮಹಿಳಾ ವಿಭಾಗ ಹಾಗೂ ಧಾರವಾಡ ವಿಭಾಗ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದವು.

ಶುಕ್ರವಾರ ಸಂಜೆ ನಡೆದ ಕ್ರೀಡಾಕೂಟ ಸಮಾರೋಪದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಕ್ರೀಡೆಯು ಜೀವನದ ಬಹುಮುಖ್ಯ ಅಂಗ. ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಮುಂದಿನ ಪೀಳಿಗೆಗೆ ಇಂತಹ ಚಟುವಟಿಕೆಗಳು ಸ್ಪೂತಿರ್ದಾಯಕವಾಗಲಿ ಎಂದರು.

ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಮಾತನಾಡಿ, ಒತ್ತಡದ ಬದುಕಿನಲ್ಲಿ ಮನುಷ್ಯ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗಿರಲು ಇಂತಹ ಕ್ರೀಡಾ ಚಟುವಟಿಕೆಗಳು ಅವಶ್ಯಕವಾಗಿವೆ. ಈ ನಿಟ್ಟಿನಲ್ಲಿ ಕಳೆದ 3 ದಿನಗಳಿಂದ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು. ಇದರ ಯಶಸ್ಸಿಗೆ ಶ್ರಮಿಸಿದ ಇಲಾಖೆಯ ಎಲ್ಲ ಸಿಬ್ಬಂದಿ ಅಭಿನಂದನಾರ್ಹರು ಎಂದರು.

ಡಿಸಿಪಿಗಳಾದ ರವೀಶ್ ಸಿ.ಆರ್, ರಾಜೀವ್ ಎಂ., ಎಸಿಪಿಗಳಾದ ಬಲ್ಲಪ್ಪ ನಂದಗಾವಿ, ವಿನೋದ ಮುಕ್ತೇದಾರ, ಆರ್.ಕೆ. ಪಾಟೀಲ, ಇಲಾಖೆಯ ಅಧಿಕಾರಿಗಳು, ಕುಟುಂಬಸ್ಥರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net