ಗದಗ ಜಿಲ್ಲಾ ಪೋಲಿಸ್ ಕ್ರೀಡಾಕೂಟಕ್ಕೆ ನ್ಯಾಯದೀಶರಾದ ಬಸವರಾಜ ಚಾಲನೆ

27GDG02
Published on

ಗದಗ: ನವೆಂಬರ 26 ರಿಂದ 28 ರವರೆಗೆ ಜರುಗಲಿರುವ ಗದಗ ಜಿಲ್ಲಾ ಪೋಲಿಸ್ ಕ್ರೀಡಾಕೂಟಕ್ಕೆ ಜಿಲ್ಲಾ ಸತ್ರ ನ್ಯಾಯಾದೀಶರಾದ ಬಸವರಾಜ ಅವರು ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ರವರಿವಾರ ಪಾರಿವಾಳ ಹಾಗೂ ಬಲೂನುಗಳನ್ನು ಹಾರಿಬಿಡುವ ಮೂಲಕ ಚಾಲನೇ ನೀಡಿದರು.

ನಂತರ ಮಾತನಾಡಿದ ಅವರು ಪೋಲಿಸರು ದೈನಂದಿನ ಕರ್ತವ್ಯ ನಿರ್ವಹಣೆಯಲ್ಲಿ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುತ್ತಾರೆ. ಒತ್ತಡವನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಕರ್ತವ್ಯ ನಿರ್ವಹಿಸಬೇಕಾದರೆ ಉತ್ತಮ ಆರೋಗ್ಯ ಹೊಂದಿರಬೇಕು. ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹೊಂದಲು ದೈನಂದಿನ ದಿನಚರಿಯಲ್ಲಿ ದೈಹಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.

ಆರೋಗ್ಯಕರವಾದ ದೇಹದಲ್ಲಿ ಆರೋಗ್ಯಕರ ಮನಸ್ಸು ಇರುತ್ತದೆ ಎಂಬ ನಾನ್ನುಡಿಯನ್ನು ನಾವೆಲ್ಲರೂ ಅಳವಡಿಸಿಕೊಂಡು ದೈಹಿಕವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಆರೋಗ್ಯಯುತ ಜೀವನ ನಮ್ಮದಾಗಿಸಿಕೊಳ್ಳಬೇಕು. ದೈಹಿಕ ಚಟುವಟಿಕೆ ನಿರಂತರವಾಗಿ ಮಾಡುವದರಿಂದ ಮನಸ್ಸು ಹುಮ್ಮಸ್ಸಿನಿಂದ ಇರಲಿದೆ. ಕ್ರೀಡೆಯಿಂದ ಮಾನಸಿಕ ಸ್ಥಿತಿ ಸ್ಥಿರವಾಗುವದರೊಂದಿಗೆ ನಮ್ಮಲ್ಲಿ ನಾಯಕತ್ವ ಗುಣ ವೃದ್ಧಿಯಾಗುತ್ತದೆ ಎಂದು ಹೇಳಿದರು.

ಸತತ ಹದಿನೆಂಟು ವರ್ಷದಿಂದ ಗದಗ ಜಿಲ್ಲೆಗೆ ರಾಜ್ಯ, ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಂಡು ಪ್ರಶಸ್ತಿ ತಂದಿದ್ದಕ್ಕಾಗಿ ಪುಷ್ಪಾ ಮಣ್ಣೂರ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ, ಪೋಲಿಸ ವರಿಷ್ಠಾಧಿಕರಿ ಬಿ.ಎಸ್.ನೇಮಗೌಡ ಸೇರಿದಂತೆ ಪೋಲಿಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂಧಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net