

ಶಿವಮೊಗ್ಗ: ನಗರದಲ್ಲಿ ಅರ್ಧ ಹೆಲ್ಮೆಟ್ ಧರಿಸಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದ ಸಂಚಾರ ಪೊಲೀಸರು, ನೂರಾರು ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದರು. ಶುಕ್ರವಾರ ಸಂಜೆ ಖುದ್ದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಅವರ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಯಿತು. ನಗರದ ಸೀನಪ್ಪ ಶೆಟ್ಟಿ ವೃತ್ತದಲ್ಲಿ ಹಾಫ್ ಹೆಲ್ಮೆಟ್ ಕಾರ್ಯಾಚರಣೆ ನಡೆಸಲಾಯಿತು. ಐಎಸ್‌ಐ ಗುರುತು ಇಲ್ಲದ ಅಸುರಕ್ಷಿತ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದವರನ್ನು ಸಂಚಾರ ಠಾಣೆ ಪೊಲೀಸರು ತಡೆದು ಹಾಫ್ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದರು. ಕೆಲವು ದಿನದ ಹಿಂದೆ ಹಾಫ್ ಹೆಲ್ಮೆಟ್ ವಿರುದ್ಧ ಕಾರ್ಯಾಚರಣೆ ನಡೆಸಿ ರಾಶಿಗಟ್ಟಲೆ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಶುಕ್ರವಾರ ಕೂಡ ಕಾರ್ಯಾಚರಣೆ ನಡೆಸಿ ಹಾಫ್ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದರು. ವೃತ್ತದಲ್ಲಿ ಹಾಫ್ ಹೆಲ್ಮೆಟ್‌ಗಳ ರಾಶಿ ಹಾಕಲಾಗಿತ್ತು.