

ಮಂಗಳೂರು: ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅಂತಿಮಯಾತ್ರೆ ವೇಳೆ ಹಿಂದು ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಿದ್ದ ಸುಬ್ರಹ್ಮಣ್ಯ ಠಾಣೆಯ ಪಿಎಸ್‌ಐ ಜಂಬೂ ರಾವ್, ಹೆಡ್‌ಕಾನ್‌ಸ್ಟೆಬಲ್ ಬಾಲಕೃಷ್ಣ ಮತ್ತು ಬೆಳ್ಳಾರೆ ಠಾಣೆ ಪಿಎಸ್‌ಐ ರುಕ್ಮ ನಾಯ್ಕ ಅವರನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ದೇವಜೋತಿ ರೇ ಆದೇಶ ಹೊರಡಿಸಿದ್ದಾರೆ.
ಹೊಸ ಎಸ್‌ಐಗಳಾಗಿ ಸುಬ್ರಹ್ಮಣ್ಯ ಠಾಣೆಗೆ ವಿಟ್ಲ ಠಾಣೆಯ ಮಂಜುನಾಥ ಟಿ ಅವರನ್ನು ಹಾಗೂ ಬೆಳ್ಳಾರೆಗೆ ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್‌ಐ ಸುಹಾಸ್ ಆರ್.ಅವರನ್ನು ನೇಮಕ ಮಾಡಲಾಗಿದೆ.
ಹಿಂದು ಕಾರ್ಯಕರ್ತರ ಮೇಲಿನ ಲಾಠಿ ಪ್ರಹಾರ ಬಗ್ಗೆ ಭಾರಿ ಆಕ್ಷೇಪ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಐಜಿಪಿ ಈ ಆದೇಶ ಹೊರಡಿಸಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.