ಶಿರಾಡಿ ಚೆಕ್ ಪೋಸ್ಟ್: ಕರ್ತವ್ಯ ಲೋಪ ಎಸಗಿದ 6 ಪೊಲೀಸರ ಅಮಾನತು

Published on

ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪ ಹಿನ್ನೆಲೆ ಸಕಲೇಶಪುರ ಗ್ರಾಮಾಂತರ ಠಾಣೆಯ 6 ಪೊಲೀಸ್ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅಮಾನತು ಮಾಡಿದ್ದಾರೆ.
ರಾತ್ರಿ ವೇಳೆಯಲ್ಲಿ ಶಿರಾಡಿ ಘಾಟ್ ರಸ್ತೆಯಲ್ಲಿ ನಿರ್ಬಂಧಿತ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಿ ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net