ತಪಾಸಣೆ ಮಾಡಿದ ಕಾರಿನಲ್ಲಿ ಪೊಲೀಸರಿಗೆ ಸಿಕ್ಕಿದ್ದು 18 ಲಕ್ಷ ರೂ.!

New Project (2)
Published on

ಹುಬ್ಬಳ್ಳಿ: ದಾಖಲೆ ಇಲ್ಲದೆ ಕಾರಿನಲ್ಲಿ ಅಕ್ರಮವಾಗಿ 18ಲಕ್ಷ ರೂಪಾಯಿ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಚುನಾವಣೆಯಲ್ಲಿ ಅಕ್ರಮ ತಡೆಯುವ ಸಲುವಾಗಿ ಹಾಕಲಾಗಿದ್ದ ಚೆಕ್​ಪೋಸ್ಟ್​ ಬಳಿ ಅಂಕೋಲಾ ಮಾರ್ಗವಾಗಿ ಬಂದ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ.

ಹಣದ ಕುರಿತು ವ್ಯಕ್ತಿ ಯಾವುದೇ ಮಾಹಿತಿ ಅಥವಾ ದಾಖಲೆಯನ್ನು ನೀಡದ ಹಿನ್ನಲೆಯಲ್ಲಿ ಪೊಲೀಸರು, ತಹಶೀಲ್ದಾರ್​​ ಸ್ಥಳಕ್ಕಾಗಮಿಸಿ ಕಾರು, ಹಣ ಹಾಗೂ ವ್ಯಕ್ತಿಯನ್ನ ವಶಕ್ಕೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net