ನೀತಿ ಸಂಹಿತೆ ಉಲ್ಲಂಘನೆ; ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ವಿರುದ್ಧ ದೂರು ದಾಖಲು

Rudrappa Lamani
Published on

ಹಾವೇರಿ: ಮತದಾರರಿಗೆ 1.50 ಲಕ್ಷ ರೂ. ಮೌಲ್ಯದ ಟೀ ಶರ್ಟ್‌ಗಳನ್ನು ಹಂಚಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಹಾವೇರಿ ವಿಧಾನಸಭೆ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ವಿರುದ್ಧ ಶಹರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಚುನಾವಣಾಧಿಕಾರಿ ವಸೀಂ ಅಕ್ರಂ ಮಹ್ಮದಪಾರೂಕ ಮಿರ್ಚಿ ದೂರು ದಾಖಲಿಸಿದ್ದಾರೆ. ರುದ್ರಪ್ಪ ಲಮಾಣಿ 2023 ಏಪ್ರೀಲ್ 17ರಂದು ವಿಧಾನಸಭೆ ಚುನಾವಣೆ ನಿಮಿತ್ತ ಹಾವೇರಿಯ ಮೈಲಾರ ಮಹದೇವಪ್ಪ ವೃತ್ತದಿಂದ ಹುಕ್ಕೇರಿ ಮಠದವರೆಗೆ ಮೆರವಣಿಗೆ ನಡೆಸಿ ತಹಸೀಲ್ದಾರ್ ಕಚೇರಿ ಬಂದು ನಾಮಪತ್ರ ಸಲ್ಲಿಸಿದ್ದರು.
ಈ ಸಮಯದಲ್ಲಿ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯದೆ 1.50 ಲಕ್ಷ ರೂ. ಮೌಲ್ಯದ 1050 ಟೀ ಶರ್ಟ್‌ಗಳನ್ನು ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಹಂಚಿಕೆ ಮಾಡುವ ಮೂಲಕ ಮತದಾರರಿಗೆ ಆಸೆ, ಆಮಿಷವೊಡ್ಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net