ಪೋಲಿಯೋ ಲಸಿಕೆ ಹಾಕಿಸಿ ; 1,25,699 ಮಕ್ಕಳಿಗೆ ಲಸಿಕೆ ಹಾಕಲು ಗುರಿ ಜಿಲ್ಲಾದ್ಯಂತ 652 ಲಸಿಕಾ ಕೇಂದ್ರ

26cmy3
Published on

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಫೆ.27ರಂದು 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವ ಅಭಿಯಾವನ್ನು ಕೈಗೊಳ್ಳಲಾಗಿದೆ. 1,25,699 ಮಕ್ಕಳಿಗೆ ಲಸಿಕೆ ಹಾಕಲು ಗುರಿ ಹೊಂದಲಾಗಿದೆ. ಜಿಲ್ಲಾದ್ಯಂತ 652 ಲಸಿಕಾ ಕೇಂದ್ರಗಳನ್ನು ತೆರೆದಿದ್ದು, 2,511 ವ್ಯಾಕ್ಸಿನೇಟರ್‌ಗಳು, 135 ಮೇಲ್ವಿಚಾರಕ ಸಿಬ್ಬಂದಿಯನ್ನು ನೇಮಿಸಲಾಗಿದೆ. ಜಿಲ್ಲಾದ್ಯಂತ ನಗರ ಪ್ರದೇಶಗಳಲ್ಲಿ ಬಸ್ ನಿಲ್ದಾಣ, ಜನ ಸಂದಣಿ ಪ್ರದೇಶಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಿಸಲು 31 ಟ್ರಾನ್ಸಿಟ್ ಬೂತ್‌ಗಳನ್ನು ತೆರೆಯಲಾಗಿದೆ.

ಜಿಲ್ಲಾದ್ಯಂತ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ಬೂತ್‌ಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ ನೀಡಲಾಗುತ್ತದೆ. ಅನಿವಾರ್ಯ ಕಾರಣಗಳಿಂದ ಬೂತ್‌ಗೆ ಮಕ್ಕಳು ಬಾರದಿದ್ದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 2 ದಿನ ಹಾಗೂ ನಗರ ಪ್ರದೇಶಗಳಲ್ಲಿ 3 ದಿನ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆ, ಶುಶ್ರೂಷಕಿಯರ ಮೂಲಕ ಮನೆ ಮನೆಗೂ ಭೇಟಿ ನೀಡಿ ಲಸಿಕೆ ಹಾಕಿಸಲಾಗುತ್ತದೆ.

ಕಡ್ಡಾಯವಾಗಿ ಲಸಿಕೆ ಹಾಕಿಸಿ: ಪಾಲಕರು 5 ವರ್ಷಗಳೊಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಜಿಲ್ಲೆಯನ್ನು ಪೋಲಿಯೋ ಮುಕ್ತವಾಗಿಸಲು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಮನವಿ ಮಾಡಿದ್ದಾರೆ. ಈಗಾಗಲೇ ಅಭಿಯಾನ ಯಶಸ್ವಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಶೇ.100 ಗುರಿ ಸಾಧಿಸಲು ಶ್ರಮಿಸಲಾಗುತ್ತದೆ. ಈ ನಿಟ್ಟಿನಲ್ಲಿ ಯಾವುದೇ ಮಗುವೂ ಲಸಿಕೆ ಹಾಕಿಸಿಕೊಳ್ಳುವುದರಿಂದ ವಂಚಿತರಾಗದಿರಲು ಬಸ್ ನಿಲ್ದಾಣ, ಆಸ್ಪತ್ರೆ, ಅಂಗನವಾಡಿ ಕೇಂದ್ರ, ನಗರ ಮತ್ತು ಗ್ರಾಮೀಣ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net