

ಬೇಲೂರು: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಶಾಸಕ ಎಚ್.ಕೆ.ಸುರೇಶ್ ಮಗುವಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿದರು.
ಬಳಿಕ ಮಾತನಾಡಿದ ಅವರು, ರಾಜ್ಯಾದ್ಯಂತ ಮಾ.3ರಿಂದ ಅಧಿಕೃತವಾಗಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯುತ್ತಿದೆ. ಭವಿಷ್ಯದಲ್ಲಿ ಮಕ್ಕಳು ಅಂಗವಿಕಲರಾಗಬಾರದು ಎಂಬ ಉದ್ದೇಶದಿಂದ, ಪೋಲಿಯೋ ತಡೆಗಟ್ಟುವುದಕ್ಕಾಗಿ ಹಾಗೂ ಮಕ್ಕಳಲ್ಲಿ ದೈಹಿಕ ಸಾಮರ್ಥ್ಯ ಇಮ್ಮಡಿಗೊಳಿಸುವ ಕಾರಣಕ್ಕಾಗಿ ಲಸಿಕಾ ಕಾರ್ಯಕ್ರಮವನ್ನು ಸರ್ಕಾರ ಆಯೋಜಿಸಿದೆ. ತಾಲೂಕಿನಲ್ಲಿ ಐದು ವರ್ಷದೊಳಗಿನ ಒಟ್ಟು 14, 754 ಮಕ್ಕಳಿದ್ದು ಯಾರೂ ಲಸಿಕೆಯಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗುವುದು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಮಹೇಂದ್ರ, ನೋಡಲ್ ಅಧಿಕಾರಿ ಡಾ.ಪ್ರಮೋದ್, ಸಿಬ್ಬಂದಿ ಉಷಾ, ದಯಾನಂದ್, ರವಿಕುಮಾರ್ ಇತರರಿದ್ದರು.