ಮಿಸ್ಟಿ ಹಿಲ್ಸ್ ವತಿಯಿಂದ ಪೊಲಿಯೋ ಲಸಿಕೆ

misty hils
Published on

ಮಡಿಕೇರಿ: ಪಲ್ಸ್ ಪೊಲಿಯೋ ಅಭಿಯಾನದ ಅಂಗವಾಗಿ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ೫ ವರ್ಷದೊಳಗಿನ ಪುಟಾಣಿಗಳಿಗೆ ಲಸಿಕೆ ಹಾಕಲಾಯಿತು.


ಮಡಿಕೇರಿಯ ಅಶೋಕ ಪುರದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಪೊಲಿಯೋ ಲಸಿಕೆಯನ್ನು ಆ ವ್ಯಾಪ್ತಿಯ ೫ ವರ್ಷದೊಳಗಿನ ಮಕ್ಕಳಿಗೆ ಹಾಕಲಾಯಿತು.


ಈ ಸಂದರ್ಭ ಮಾತನಾಡಿದ ರೋಟರಿ ವಲಯ ೬ರ ಸಹಾಯಕ ಗವರ್ನರ್ ದೇವಣಿರ ತಿಲಕ್, ಅಂತರರಾಷ್ಟ್ರೀಯ ಮಟ್ಟದಲ್ಲಿ ಪೊಲಿಯೋ ನಿವಾರಣೆಗಾಗಿ ರೋಟರಿ ಸಂಸ್ಥೆಯು ಬಹತ್ ಆಂದೋಲನ ಕೈಗೊಂಡಿದೆ. ಇದರ ಪರಿಣಾಮವಾಗಿಯೇ ಇಂದು ಬಹುತೇಕ ದೇಶಗಳಲ್ಲಿ ಪೊಲಿಯೋ ಕಣ್ಮರೆಯಾಗಿದೆ ಎಂದು ತಿಳಿಸಿದರು.


ರೋಟರಿ ಮಿಸ್ಟಿ ಹಿಲ್ಸ್‌ನ ಪಲ್ಸ್ ಪೊಲಿಯೋ ಯೋಜನೆಯ ನಿರ್ದೇಶಕ ಡಾ.ಚೇತನ್ ಶೆಟ್ಟಿ, ಮಿಸ್ಟಿ ಹಿಲ್ಸ್ ನಿರ್ದೇಶಕ ಎಚ್.ಟಿ.ಅನಿಲ್, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾರ್ಯದರ್ಶಿ ರತ್ನಾಕರ್ ರೈ, ನಿರ್ದೇಶಕರು ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net