ಕೆ.ಆರ್.ಸಾಗರದಲ್ಲಿ ಪೋಲಿಯೋ ಲಸಿಕೆ

03-03--krs1
ಕೆ.ಆರ್.ಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾಪಂ ಅಧ್ಯಕ್ಷೆ ಶ್ರುತಿ ಶ್ರೀನಿವಾಸ್ ಮಗುವಿಗೆ ಪೋಲಿಯೋ ಲಸಿಕೆ ಹಾಕಿದರು. ರವಿಶಂಕರ್, ಡಾ.ಪ್ರಪುಲ್ಲಾ, ಡಾ.ಸುದೀಪ್‌ಕುಮಾರ್, ಮಂಜುಳಾ ಇತರರು ಇದ್ದರು.
Published on

ಕೆ.ಆರ್.ಸಾಗರ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಕೆ.ಆರ್.ಸಾಗರ ಗ್ರಾಪಂ ಅಧ್ಯಕ್ಷೆ ಶ್ರುತಿ ಶ್ರೀನಿವಾಸ್ ಅವರು ಮಗುವಿಗೆ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ನಿಮ್ಮ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ. ಹೀಗಾಗಿ 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಸಲಹೆ ನೀಡಿದರು. ಗ್ರಾಪಂ ಉಪಾಧ್ಯಕ್ಷ ರವಿಶಂಕರ್, ಸದಸ್ಯೆ ಮಂಜುಳಾ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಪುಲ್ಲಾ, ಆಯುಷ್ ವೈದ್ಯ ಡಾ.ಸುದೀಪ್‌ಕುಮಾರ್, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net