ನವೆಂಬರ್‌ನಲ್ಲಿ ರಾಜಕೀಯ ನಿರ್ಧಾರ ಪ್ರಕಟ: ಜಿ.ಟಿ. ದೇವೇಗೌಡ

GTD
Published on

ಮೈಸೂರು: ನವೆಂಬರ್ ತಿಂಗಳಿನಲ್ಲಿ ನನ್ನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಣಸೂರಿನಲ್ಲಿ ಶುಕ್ರವಾರ ಹಮ್ಮಿಕೊಂಡ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದ್ದರು. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಕುಮಾರಸ್ವಾಮಿ ಅವರ ಕೈಯಲ್ಲಿ ನನಗೆ ಹಾರ ಹಾಕಿಸಿದರು. ಪಕ್ಷದಲ್ಲಿ ಉಳಿಯುವಂತೆ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ. ನನ್ನ ನಿರ್ಧಾರ ತಿಳಿಸಲು ಎರಡು ತಿಂಗಳ ಕಾಲಾವಕಾಶ ನೀಡಬೇಕು ಎಂದು ಕುಮಾರಸ್ವಾಮಿ ಅವರ ಬಳಿ ತಿಳಿಸಿದ್ದೇನೆ ಎಂದರು.

ಕಾಂಗ್ರೆಸ್ ಪಕ್ಷಕ್ಕೆ ಆಗಮಿಸುವಂತೆ ಡಿ.ಕೆ. ಶಿವಕುಮಾರ್ ಆಹ್ವಾನ ನೀಡಿದ್ದಾರೆ. ಈ ಕುರಿತು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ, ಸ್ವಲ್ಪ ದಿನದಲ್ಲಿ ಎಲ್ಲರು ಸೇರಿ ಮಾತಾಡೋಣ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ ಎಂದರು.

ಕುಮಾರಸ್ವಾಮಿ ಬಳಿ ನಾನು ಎಂದಿಗೂ ಮಗ ಹರೀಶ್ ಗೌಡನಿಗೆ ಎಂಎಲ್‌ಎ ಟಿಕೆಟ್ ನೀಡಬೇಕು ಎಂದು ಕೇಳಿಲ್ಲ. ಹರೀಶ್ ಗೌಡ ಅವರನ್ನು ಎಂಎಲ್‌ಎ ಮಾಡಬೇಕೆಂದು ಜನರೇ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net