ಬಿಜೆಪಿ ಹಾಗೂ ಜೆಡಿಎಸ್ ಅವರ ರಾಜಕೀಯ ತಂತ್ರಗಾರಿಕೆ ಫಲಿಸುವುದಿಲ್ಲ

tanveer
Published on

ಮೈಸೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕುದುರೆ ವ್ಯಾಪಾರದ ನಿರೀಕ್ಷೆಯಲ್ಲಿದ್ದು, ಅವರ ರಾಜಕೀಯ ತಂತ್ರಗಾರಿಕೆ ಫಲಿಸುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಟಾಂಗ್ ನೀಡಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ಗೆ ನಿಗದಿತ ಪ್ರಮಾಣದ ಮತಗಳಿಲ್ಲ, ಗೆಲ್ಲುವ ಸಾಮರ್ಥ್ಯ ಇಲ್ಲದಿದ್ದರೂ 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಕುದುರೆ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ.

ಕಾಂಗ್ರೆಸ್‌ಗೆ 135 ಮತ್ತು ಮೂವರು ಪಕ್ಷೇತರರು ಸೇರಿ 138 ಶಾಸಕರ ಬೆಂಬಲವಿದೆ. ಹೀಗಾಗಿ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳು ಸುಲಭವಾಗಿ ಗೆಲುವು ಸಾಧಿಸಲಿದ್ದು, ಇದರಲ್ಲಿ ಜೆಡಿಎಸ್-ಬಿಜೆಪಿಯ ರಾಜಕೀಯ ತಂತ್ರಗಾರಿಕೆ ಫಲಿಸುವುದಿಲ್ಲ ಎಂದ ಅವರು, ಕುದುರೆ ವ್ಯಾಪಾರದ ಮೂಲಕ ಶಾಸಕರನ್ನು ಸೆಳೆಯುವುದನ್ನು ತಪ್ಪಿಸಬೇಕಿದೆ. ಇದಕ್ಕಾಗಿ ಪಕ್ಷಾಂತರ ನಿಷೇಧ ಕಾಯ್ದೆಯನ್ನು ಬಿಗಿಪಡಿಸಬೇಕು. ಒಮ್ಮೆ ಒಬ್ಬರು ಪಕ್ಷಾಂತರ ಮಾಡಿದ ಮೇಲೆ 6 ವರ್ಷ ಚುನಾವಣೆಗೆ ನಿಲ್ಲದಂತೆ ಕ್ರಮಕೈಗೊಳ್ಳಬೇಕು ಎಂದು ರಾಜ್ಯಸಭಾ ಚುನಾವಣೆಗೆ ಜೆಡಿಎಸ್‌ನಿಂದ 5ನೇ ಅಭ್ಯರ್ಥಿ ಕಣಕ್ಕಿಳಿಸಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net