ರಾಜಕಾರಣಿಗಳು ಮನುಷ್ಯತ್ವ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ

sara-mahesh
Published on

ಮಡಿಕೇರಿ: ಇಂದು ರಾಜಕಾರಣಿಗಳು ಚುನಾವಣೆ ಪ್ರಚಾರಕ್ಕೋಸ್ಕರ ಮನುಷ್ಯತ್ವ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ಚುನಾವಣಾ ಉಸ್ತುವಾರಿ ಸಾ.ರಾ.ಮಹೇಶ್ ಬೇಸರ ವ್ಯಕ್ತಪಡಿಸಿದರು.


ಮಡಿಕೇರಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರಿಗೆ ಆತ್ಮೀಯವಾಗಿದ್ದ ಹಿರಿಯ ಮುಖಂಡರೊಬ್ಬರು ಕುಮಾರಸ್ವಾಮಿಯವರು ಏನು ವೀಲ್‌ಚೇರ್‌ನಲ್ಲಿ ಬರುತ್ತಾರ ಎಂದು ಹೇಳುತ್ತಾರೆ. ಇವರ ಜತೆಗೆ ಶಾಸಕರೊಬ್ಬರು ಕೂಡ ಸಾರ್ವಜನಿಕ ಸಭೆಯಲ್ಲಿ ಚುನಾವಣೆ ಬಂದ ಸಂದರ್ಭದಲ್ಲೆಲ್ಲ ಕುಮಾರಸ್ವಾಮಿಯವರಿಗೆ ಆರೋಗ್ಯ ತಪ್ಪುತ್ತದೆ ಎಂದು ಹೇಳಿದ್ದಾರೆ. ರಾಜಕಾರಣಿಗಳು ಯಾವ ಮಟ್ಟಕ್ಕೆ ಇಳಿದಿದ್ದೇವೆ ಅಂದರೆ, ಚುನಾವಣೆ ಪ್ರಚಾರಕ್ಕೋಸ್ಕರ ಮನುಷ್ಯತ್ವ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ ಎಂದರು.


ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಮಾತನಾಡಿ, ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರವರು ಮೋದಿಯವರೊಂದಿಗೆ ಸಮಾಲೋಚನೆ ನಡೆಸಿ, ಹೊಂದಾಣಿಕೆ ತೀರ್ಮಾನಿಸಲಾಗಿದೆ. ಒಗ್ಗಟ್ಟಿನಿಂದ ಹೋಗಲು ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net