ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ಕೊಡಿ: ಎಐಸಿಸಿ ಅಧ್ಯಕ್ಷರಿಗೆ ಸಮಕಾಲೀನ ಮುಖಂಡರ ಮನವಿ

Congress)
Published on

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿ ಕಣಕ್ಕಿಳಿಸುವ ಸಂಬಂಧ ಸ್ಪರ್ಧಾಕಾಂಕ್ಷಿಯರೂ ಆಗಿರುವ ಜಿಲ್ಲೆಯ ಹಿರಿಯ ಮುಖಂಡರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭಾನುವಾರ ಭೇಟಿ ಮಾಡಿದ್ದಾರೆ. ಮಾತ್ರವಲ್ಲದೆ ಪಕ್ಷಕ್ಕೆ ಹಲವು ವರ್ಷದಿಂದ ದುಡಿದಿರುವವರಿಗೆ ಅವಕಾಶ ಕೊಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಮಲ್ಲಿಕಾರ್ಜುನ್ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿದ ಹಿರಿಯ ಮುಖಂಡರು, ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪಕ್ಷದೊಳಗೆ ನಡೆಯುತ್ತಿರುವ ಬೆಳವಣಿಗೆ ಹಾಗೂ ಅಸಮಾಧಾನದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಮುಖವಾಗಿ ಇತ್ತೀಚಿಗೆ ಪಕ್ಷ ಸೇರ್ಪಡೆಯಾದವರಿಗೆ ಮಾನ್ಯತೆ ನೀಡಲಾಗುತ್ತಿದೆ. ಜತೆಗೆ ಬಿ ಫಾರ್ಮ್ ಕೊಡುವ ವಿಚಾರದಲ್ಲಿ ಆದ್ಯತೆ ನೀಡುತ್ತಿರುವ ಬೇಸರವಿದೆ ಎಂದು ಪರೋಕ್ಷವಾಗಿ ಡಾ.ಕೃಷ್ಣ ಹಾಗೂ ಕೆ.ಕೆ.ರಾಧಾಕೃಷ್ಣ ಕೀಲಾರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಪಕ್ಷಕ್ಕೆ ಸೇವೆ ಸಲ್ಲಿಸಿರುವವರಿಗೆ ಅವಕಾಶ ನೀಡಬೇಕು. ಆದ್ದರಿಂದ ಪರಿಶೀಲನೆ ನಡೆಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಸ್ಪಂದಿಸಿರುವ ಖರ್ಗೆ, ಬಿ ಫಾರ್ಮ್ ನೀಡುವ ಸಂಬಂಧ ಚರ್ಚೆ ಮಾಡಿ ಸೂಕ್ತ ನಿರ್ಧಾರ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮಾಜಿ ಶಾಸಕ ಎಚ್.ಬಿ.ರಾಮು, ಮೈಷುಗರ್ ಮಾಜಿ ಅಧ್ಯಕ್ಷರಾದ ಬಿ.ಸಿ.ಶಿವಾನಂದ, ಸಿದ್ದರಾಮೇಗೌಡ, ಹಾಲಹಳ್ಳಿ ರಾಮಲಿಂಗಯ್ಯ, ಕೆಪಿಸಿಸಿ ಪರಿಶಿಷ್ಟ ವಿಭಾಗದ ಉಪಾಧ್ಯಕ್ಷ ಎಂ.ಡಿ.ಜಯರಾಂ, ಶಿವಲಿಂಗೇಗೌಡ, ಹನಕೆರೆ ಶಿವರಾಮು, ಅಮರಾವತಿ ಚಂದ್ರಶೇಖರ್, ಸಿದ್ಧಾರೂಢ ಸತೀಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net