'ರಾಜಕಾರಣಕ್ಕೂ, ಜಾತಿ ಗಣತಿ ವರದಿಗೂ ಸಂಬಂಧವಿಲ್ಲ'

H-C-Mahadevappa
Published on

ಮೈಸೂರು: ರಾಜಕಾರಣಕ್ಕೂ, ಜಾತಿ ಗಣತಿ ವರದಿ ಬಿಡುಗಡೆಗೂ ಯಾವುದೇ ಸಂಬಂಧವಿಲ್ಲ. ಜಾತಿ ಗಣತಿಯನ್ನು ಚುನಾವಣೆಯೊಂದಿಗೆ ತಳಕು ಹಾಕುವುದು ಸರಿಯಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಲೋಕಸಭೆಗೂ ಮುನ್ನ ಜಾತಿಗಣತಿ ಬಿಡುಗಡೆಯಾಗಲ್ಲ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ದೇಶದಲ್ಲಿ ಸಂಪತ್ತು, ಅಧಿಕಾರ ಸಮವಾಗಿ ಹಂಚಿಕೆ ಆಗಬೇಕು ಎಂಬುದು ಸಂವಿಧಾನದ ಆಶಯವಾಗಿದೆ. ಯಾರ‌್ಯಾರ ಪರಿಸ್ಥಿತಿ ಹೇಗಿದೆ? ಎಷ್ಟು ಜನಸಂಖ್ಯೆ ಇದೆ ಎನ್ನುವುದನ್ನು ಅರಿಯಲು ಜಾತಿ ಗಣತಿ ನಡೆಸಲಾಗಿದೆ ಎಂದು ತಿಳಿಸಿದರು.
ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳು ಮನುಷ್ಯರ ಮೇಲೆ ದಾಳಿ ನಡೆಸುವ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನಿಸಿ ಈಗಾಗಲೇ ಅರಣ್ಯಾಧಿಕಾರಿಗಳ ಟಾರ್ಸ್‌ಫೋರ್ಸ್ ರಚನೆ ಮಾಡಲಾಗಿದೆ. ಈ ಸಮಿತಿಯೂ ಜನರಿಗೆ ಅರಿವು ಮೂಡಿಸಿ ವನ್ಯಜೀವಿಗಳ ದಾಳಿ ಪ್ರಕರಣ ಮರುಕಳಿಸದಂತೆ ಆಯ್ದ ಸ್ಥಳದಲ್ಲಿ ಮುನ್ನೆಚ್ಚರಿಕೆ ವಹಿಸಲಿದ್ದಾರೆ ಎಂದು ಹೇಳಿದರು.
ಸುನೀಲ್ ಬೋಸ್ ರಾಜಕೀಯದಲ್ಲಿ ಸಕ್ರಿಯವಾಗಿ ಇದ್ದಾನೆ. ಮೂರು ಬಾರಿ ವಿಧಾನಸಭಾ ಟಿಕೆಟ್ ಬಯಸಿದ್ದು, ಅದು ಕೈ ತಪ್ಪಿದೆ. ಅವನು ಲೋಕಸಭೆ ಚುನಾವಣೆಗೆ ಆಕಾಂಕ್ಷಿಯಾಗಿರುವುದರಲ್ಲಿ ತಪ್ಪಿದೆಯಾ? ಅಂತಿಮವಾಗಿ ಪಕ್ಷ ತೀರ್ಮಾನ ಮಾಡಲಿದೆ. ಇಲ್ಲಿ ಕುಟುಂಬ ರಾಜಕಾರಣದ ಪ್ರಶ್ನೆ ಬರುವುದಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net