ಸಾವಿನ ಮನೆಯಲ್ಲಿ ರಾಜಕಾರಣ ಸರಿಯಲ್ಲ

h24-Shurjewala Neha House
Published on

ಹುಬ್ಬಳ್ಳಿ: ಈ ಮನೆ ಹೊರತುಪಡಿಸಿ ನೀವು ರಾಜಕಾರಣ ಮಾಡಿ. ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ, ಬಿಜೆಪಿ ವಿರುದ್ಧ ಹರಿಹಾಯ್ದರು.
ಮೃತ ನೇಹಾಳ ಮನೆಗೆ ಬುಧವಾರ ಭೇಟಿ ನೀಡಿ ನೇಹಾಳ ತಂದೆ-ತಾಯಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ ಕೇವಲ ನಿರಂಜನ ಹಿರೇಮಠ ಪುತ್ರಿ ಅಲ್ಲ
ಇಡೀ ಕರ್ನಾಟಕದ ಪುತ್ರಿ. ನಿರಂಜನ ನಮ್ಮ ಕುಟುಂಬದ ಸದಸ್ಯರು. ಈ ಘಟನೆ ಬಗ್ಗೆ ಅತ್ಯಂತ ದುಃಖವಿದೆ. ನಾವೆಲ್ಲ ಅವರ ಜೊತೆ ಇರುತ್ತೇವೆ. ಸಂಪೂರ್ಣ ನ್ಯಾಯ ಕೊಡಿಸಲಾಗುವುದು ಎಂದರು.
ಈಗಾಗಲೇ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. ತ್ವರಿತಗತಿಯಲ್ಲಿ ನ್ಯಾಯದಾನ ಆಗಲಿದೆ. ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು. ಆಕೆಯ ಸಾವಿಗೆ ನ್ಯಾಯ ಸಿಗಲಿದೆ ಎಂದರು.
ಸಿಐಡಿ ಮೇಲೆ ನಮಗೆ ನಂಬಿಕೆ ಇದೆ. ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ. 90 ದಿನಗಳಲ್ಲಿ ಖಂಡಿತಾ ನ್ಯಾಯ ಸಿಗುವ ಖಾತ್ರಿ ಇದೆ ಎಂದು ಬಿಜೆಪಿ ಆಗ್ರಹಿಸಿದ್ದ ಸಿಬಿಐ ತನಿಖೆಯನ್ನು ತಿರಸ್ಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net