

ವಿಜಯವಾಣಿ ಸುದ್ದಿಜಾಲ ಕುಂದಾಪುರ
ಸ್ಥಳೀಯ ನಾಯಕತ್ವ, ಸ್ಥಳೀಯಾಡಳಿತ ಸಮರ್ಥವಾಗಿ ಕೆಲಸ ನಿರ್ವಹಿಸಿದಾಗ ವಾತ್ರ ಉತ್ತಮ ಸೇವೆ ನೀಡಲು ಸಾಧ್ಯ. ರಾಜಕೀಯಕ್ಕಿಂತ ಊರು ಮುಖ್ಯ. ರಾಜಕೀಯ ವಾಡಲು ಬೇರೆ ವಿಚಾರ, ವೇದಿಕೆಗಳಿವೆ. ಊರಿನ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ವಾಡಬಾರದು. ಜನರ ಪ್ರೀತಿ, ವಿಶ್ವಾಸ ಗಳಿಸುವುದು ಮುಖ್ಯ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಕುಂದಾಪುರ ತಾಲೂಕಿನ ಹಟ್ಟಿಯಂಗಡಿ ಗ್ರಾಪಂ ವಠಾರದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿ, ಗ್ರಾಪಂ., ತಾಪಂ., ನರೇಗಾ ಹಾಗೂ ದಾನಿಗಳ ಸಹಕಾರದೊಂದಿಗೆ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಗ್ರಾಪಂ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ವಾತನಾಡಿದರು.
ಸರ್ಕಾರದಿಂದ ಅನುದಾನ ಬಂದ ಬಳಿಕ ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲು ಪ್ರಾವಾಣಿಕ ಪ್ರಯತ್ನ ನಡೆಸಲಾಗುವುದು. ಪಂಚಾಯಿತಿ ಮೇಲೆ ದಾನಿಗಳು, ಊರಿನವರ ಪ್ರೀತಿ, ಕಾಳಜಿಯಿಂದ ಕಟ್ಟಡ ನಿರ್ವಾಣಗೊಂಡಿದೆ. ಜನರಿಗೆ ಉತ್ತಮ ಸೇವೆ ನೀಡುವ ಮೂಲಕ ಹಟ್ಟಿಯಂಗಡಿ ಗ್ರಾಪಂ ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸುವಂತಾಗಲಿ ಎಂದು ಹಾರೈಸಿದರು.
ಗ್ರಾಪಂ ಅಧ್ಯಕ್ಷೆ ನಾಗರತ್ನಾ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಆಡಳಿತ ಧರ್ಮದರ್ಶಿ ಎಚ್.ಬಾಲಚಂದ್ರ ಭಟ್, ಉದ್ಯಮಿ ಕೆ.ಎಂ.ಲಕ್ಷ್ಮಣ ಮಾತನಾಡಿದರು. ಕಟ್ಟಡ ನಿರ್ವಾಣಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು.
ಗ್ರಾಪಂ ಉಪಾಧ್ಯಕ್ಷ ಪ್ರತಾಪ್ಕುವಾರ್ ಶೆಟ್ಟಿ, ಉದ್ಯಮಿ ಎಚ್.ಸುಧೀರ ಶೆಟ್ಟಿ ಕೆಂಚನೂರು, ವಾಜಿ ಅಧ್ಯಕ್ಷರಾದ ಅಮೃತಾ ಪಿ.ಭಂಡಾರಿ, ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಂಗನಾಥ, ಪಿಡಿಒ ಮಂಜುನಾಥ ಕವಟೇಕರ್, ಸಂತೋಷಕುವಾರ್, ಗ್ರಾಮ ಆಡಳಿತ ಅಧಿಕಾರಿ, ಗ್ರಾಪಂ ಹಾಲಿ ಮತ್ತು ವಾಜಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾಶ್ರೀ ಸ್ವಾಗತಿಸಿದರು. ಗ್ರಾಪಂ ಸದಸ್ಯ ಕೆ.ರಾಜೀವ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯೋಗೀಶ್ ಕಾರ್ಯಕ್ರಮ ನಿರ್ವಹಿಸಿದರು.