

ಜನಪ್ರತಿನಿಧಿ ಕ್ಷೇತ್ರದ ಕಾರ್ಯಕರ್ತರ ಸವಾವೇಶ ಮೂಡುಬಿದಿರೆ: ಹಿಂದುತ್ವ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಿ ಪಕ್ಷ ಮತ್ತು ಕಾರ್ಯಕರ್ತರ ಸಿದ್ಧಾಂತಕ್ಕೆ ಧಕ್ಕೆಯಾಗದ ರೀತಿಯಲ್ಲಿ ರಾಜಕಾರಣ ನಡೆಸುವುದಾಗಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಹೇಳಿದರು.
ಮೂಡುಬಿದಿರೆ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂದ ಕಾಮಧೇನು ಸಭಾಭವನದಲ್ಲಿ ನಡೆದ ವಿಧಾನ ಪರಿಷತ್ ಜನಪ್ರತಿನಿಧಿಗಳ ಕ್ಷೇತ್ರದ ಚುನಾವಣೆಯ ಕಾರ್ಯಕರ್ತರ ಸವಾವೇಶದಲ್ಲಿ ಮಾತನಾಡಿದರು.
ಸ್ಥಳೀಯಾಡಳಿತದ ಸದಸ್ಯರ ಭಾವನೆಗಳಿಗೆ ಚ್ಯುತಿ ಬರದ ರೀತಿಯಲ್ಲಿ ಕೆಲಸ ಮಾಡುವುದಾಗಿ ತಿಳಿಸಿದರು.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಾತನಾಡಿ, ಜಾತಿ ರಾಜಕಾರಣದ ವೈಭವೀಕರಣದ ನಡುವೆಯು ಬಿಜೆಪಿ ಪಕ್ಷದ ಪ್ರಾವಾಣಿಕ ಕಾರ್ಯಕರ್ತರನ್ನು ಗುರುತಿಸಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುತ್ತಿದೆ. ಎಲ್ಲ ಜನಪ್ರತಿನಿಧಿಗಳು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಮತದಾನಮಾಡುವಂತೆ ತಿಳಿಸಿದರು.
ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಮಂಡಲ ಪ್ರಭಾರಿ ಜಯಂತ ಕೋಟ್ಯಾನ್, ಜಿಲ್ಲಾ ಉಪಾಧ್ಯಕ್ಷರಾದ ಶಾಂತಿಪ್ರಸಾದ್ ಹೆಗ್ಡೆ, ಸುನಿಲ್ ಆಳ್ವ, ಮಂಡಲ ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ, ಹರಿಪ್ರಸಾದ್ ಶೆಟ್ಟಿ, ಪುರಸಭಾಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ಚುನಾವಣಾ ಜಿಲ್ಲಾ ಸಹಸಂಚಾಲಕ ರಾಕೇಶ್ ರೈ, ಉಸ್ತುವಾರಿ ಸಹ ಪ್ರಭಾರಿ ಹರೀಶ್ ಮೂಡುಶೆಡ್ಡೆ, ಯತೀಶ್ ಅರ್ವ, ಸತೀಶ್ ಅಂಚನ್, ಲಕ್ಷ್ಮೀ ವೇದಿಕೆಯಲ್ಲಿದ್ದರು.
ಗಣೇಶ್ ಅಳಿಯೂರು ನಿರೂಪಿಸಿದರು. ಹರಿಪ್ರಸಾದ್ ಶೆಟ್ಟಿ ವಂದಿಸಿದರು.
ಕ್ಷೇತ್ರದಲ್ಲಿ ನಗರೋತ್ಥಾನ ಯೋಜನೆಯಡಿ ಮನೆಗಳ ಅಭಿವೃದ್ಧಿಗೆ ನೀಡಲಾದ ಅನುದಾನ, ದೇವಸ್ಥಾನಗಳಿಗೆ ನೀಡಲಾದ ಅನುದಾನ ಸಹಿತ ಹಲವಾರು ಪ್ರಗತಿ ಕಾರ್ಯಗಳ ಅನುದಾನಗಳನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂಪಡೆದುಕೊಂಡಿದೆ. ಈ ಕೆಟ್ಟ ಸರ್ಕಾರದ ನಡುವೆ ಜನರ ಒಲವನ್ನು ಸರ್ಕಾರಕ್ಕೆ ತಿಳಿಸಿ ಬಿಸಿ ಮುಟ್ಟಿಸಲು ಕಿಶೋರ್ ಕುಮಾರ್‌ರಂತಹ ನಾಯಕರ ಅಗತ್ಯವಿದೆ. ಉಮಾನಾಥ ಕೋಟ್ಯಾನ್, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ.
ಉಮಾನಾಥ ಕೋಟ್ಯಾನ್, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ.