ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೊಂಗಲ್ ಹಬ್ಬ

14sunti02
ಸುಂಟಿಕೊಪ್ಪ ಪೊಂಗಲ್ ಸಮಿತಿ ವತಿಯಿಂದ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಹಾಲಿನ ಕಳಶದೊಂದಿಗೆ ಮಂಗಳವಾರ ಸುಂಟಿಕೊಪ್ಪದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಶ್ರೀ ಚಾಮುಂಡೇಶ್ವರಿ ಮುತ್ತಪ್ಪ ದೇವಸ್ಥಾನದಲ್ಲಿ ಕಳಸವನ್ನಿಟ್ಟು ಪೂಜೆ ಸಲ್ಲಿಸಲಾಯಿತು.
Published on

ಸುಂಟಿಕೊಪ್ಪ: ಪೊಂಗಲ್ ಸಮಿತಿ ವತಿಯಿಂದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸಡಗರ ಸಂಭ್ರಮದಿಂದ ಪೊಂಗಲ್(ಮಕರ ಸಂಕ್ರಾಂತಿ) ಹಬ್ಬವನ್ನು ಶ್ರದ್ಧಾಭಕ್ತಿಯಿಂದ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾಧಿಗಳ ಸಮ್ಮುಖದಲ್ಲಿ ಮಂಗಳವಾರ ಆಚರಿಸಲಾಯಿತು.

ಬೆಳಗ್ಗೆ ಮಧುರಮ್ಮ ಬಡಾವಣೆಯಲ್ಲಿರುವ ವೃಕ್ಷೋದ್ಭವ ಗಣಪತಿ ದೇವಾಲಯದಲ್ಲಿ ಮಹಿಳೆಯರು ಪೂರ್ಣಕುಂಭ ಕಳಸ ಹೊತ್ತು ಸಾಗಿದರು. ದೇವಾಲಯದ ಟ್ರಸ್ಟ್ ಕಾರ್ಯದರ್ಶಿ ಎ.ಲೋಕೇಶ್‌ಕುಮಾರ್ ಪೂರ್ಣಕುಂಭ ಕಳಸವನ್ನು ಮಹಿಳೆಯರಿಗೆ ಕೊಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ನಾದಸ್ವರದೊಂದಿಗೆ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ರಾಮಮಂದಿರ, ಅಯ್ಯಪ್ಪ ದೇವಾಲಯಗಳಿಗೆ ತೆರಳಿ ಪೂಜೆಯನ್ನು ಸಲ್ಲಿಸಿ ನಂತರ ಶ್ರೀ ಚಾಮುಂಡೇಶ್ವರಿ ಮುತ್ತಪ್ಪ ದೇವಾಲಯದಲ್ಲಿ ಕಳಸಗಳನಿಟ್ಟು ಪೂಜೆ ನಡೆಸಿ, ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ಭಕ್ತರು ಪೊಂಗಲ್ ಮಾಡಿ ಹಬ್ಬವನ್ನು ಸಂತೋಷ, ಸಂಭ್ರಮದಿಂದ ಆಚರಿಸಿದರು.

ಮಧ್ಯಾಹ್ನ ನೆರೆದಿದ್ದ ನೂರಾರು ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ಸಮಿತಿಯ ಅಯ್ಯಪ್ಪ ನೇತೃತ್ವದಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಸದಸ್ಯರಾದ ಎಸ್.ಸುರೇಶ, ಎಸ್.ಸುಂದರೇಶ, ಎಂ.ರಾಜಾ, ಗಣೇಶ, ರಾಜ, ಜಗದೀಶ, ವೆಂಕಟೇಶ, ಗಣೇಶ, ಸುಭ್ರಮಣಿ, ಮುರುಗೇಶ, ಗುಣಶೇಖರ, ಏಳುಮಲೈ ಹಾಗೂ ಶರವಣ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net