ಪೊನ್ನಂಪೇಟೆ ಪ್ರೀಮಿಯರ್ ಲೀಗ್‌ಗೆ ಚಾಲನೆ

ಪೊನ್ನಂಪೇಟೆ ಪ್ರೀಮಿಯರ್ ಲೀಗ್‌ಗೆ ಚಾಲನೆ
Published on

ಗೋಣಿಕೊಪ್ಪ: ಪೊನ್ನಂಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಪೊನ್ನಂಪೇಟೆ ಪ್ರೀಮಿಯರ್ ಲೀಗ್ ಸೀಜನ್-4 ಕ್ರಿಕೆಟ್ ಪಂದ್ಯಾವಳಿಗೆ ಶುಕ್ರವಾರ ವರ್ಣರಂಜಿತ ಚಾಲನೆ ದೊರೆಯಿತು.

ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ವಿಎಸ್‌ಎಸ್‌ಎನ್ ಬ್ಯಾಂಕ್ ಅಧ್ಯಕ್ಷ ಚೀರಂಡ ಕಂದ ಸುಬ್ಬಯ್ಯ, ಠಾಣಾಧಿಕಾರಿ ನವೀನ್, ಮುಖ್ಯ ಶಿಕ್ಷಕ ವಾಸುವರ್ಮ ಚಾಲನೆ ನೀಡಿದರು.

ವಿಎಸ್‌ಎಸ್‌ಎನ್ ಅಧ್ಯಕ್ಷ ಕಂದ ಸುಬ್ಬಯ್ಯ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಕ್ರೀಡಾ ಉತ್ಸಾಹ ಕಡಿಮೆಯಾಗುತ್ತಿದೆ. ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಜತೆಗೆ ಪರಸ್ಪರ ಸ್ನೇಹ ವೃದ್ಧಿಯಾಗಲು ಸಹಕಾರಿಯಾಗಿದೆ ಎಂದರು.

ಪೊನ್ನಂಪೇಟೆ ಠಾಣಾಧಿಕಾರಿ ಎಂ.ನವೀನ್ ಮಾತನಾಡಿ, ದೈಹಿಕ ಬೆಳವಣಿಗೆಗೆ ಹಾಗೂ ಮಾನಸಿಕ ಒತ್ತಡ ಕಡಿಮೆಯಾಗಲು ಕ್ರೀಡೆ ಸಹಕಾರಿ. ಯುವ ಸಮುದಾಯ ಹೆಚ್ಚಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಪಂದ್ಯಾವಳಿ ಆಯೋಜಕ ಮಂಜು ಅಧ್ಯಕ್ಷತೆ ವಹಿಸಿದ್ದರು. ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವಾಸುವರ್ಮ, ಪಿಪಿಎಲ್ ಕ್ರಿಕೆಟ್ ಪಂದ್ಯಾವಳಿ ಕಾರ್ಯದರ್ಶಿ ಸಂತೋಷ್, ಪಟ್ಟಣ ಪಂಚಾಯಿತಿ ಸದಸ್ಯ ಅಲೀರ ಅಜೀಜ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net