ವಿದ್ಯಾರ್ಥಿಗಳ ಜತೆ ಹುಟ್ಟು ಹಬ್ಬ ಆಚರಿಸಿದ ಪೊನ್ನಣ್ಣ

ponnanna birthday 2
Published on

ಮಡಿಕೇರಿ: ಭಾಗಮಂಡಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತೆರಳಿ ಅಲ್ಲಿನ ವಿದ್ಯಾರ್ಥಿಗಳ ಜತೆಗೂಡಿ ಕೇಕ್ ವಿತರಿಸುವ ಮೂಲಕ ಜನ್ಮ ದಿನ ಆಚರಿಸಿದ್ದು ವಿಶೇಷವಾಗಿತ್ತು.


ಈ ಸಂದರ್ಭದಲ್ಲಿ ಮಕ್ಕಳಿಗೆ ಪೆನ್ನು, ಪೆನ್ಸಿಲ್ ನೀಡುವ ಮೂಲಕ ಹುಟ್ಟುಹಬ್ಬ ಆಚರಣೆ ಗಮನ ಸೆಳೆಯಿತು. ಮಕ್ಕಳು ಈ ಸಂದರ್ಭದಲ್ಲಿ ಉಲ್ಲಾಸದಿಂದ ಸಂಭ್ರಮಿಸಿದರು.


ನಂತರ ಮಾತನಾಡಿದ ಎ.ಎಸ್.ಪೊನ್ನಣ್ಣ, ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ವಿದ್ಯಾಭ್ಯಾಸ ಮುಂದುವರೆಸಬೇಕು. ಈ ಭಾಗದಲ್ಲಿ ಹಲವು ಸವಾಲುಗಳ ನಡುವೆ ವಿದ್ಯಾರ್ಥಿಗಳು ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.


ಪ್ರಕೃತಿಯ ಮಡಿಲಲ್ಲಿ ಇರುವ ತಾವು ಪರಿಸರ ಸ್ವಚ್ಚತೆಗೆ ಹೆಚ್ಚಿನ ಗಮನಹರಿಸಬೇಕು. ಸುಂದರ ಕೊಡಗು ಉಳಿಯಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.


ಬಳಿಕ ಭಾಗಮಂಡಲದ ಮಾರುಕಟ್ಟೆ ಆವರಣದಲ್ಲಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಗಮನ ಸೆಳೆದರು. ಅಲ್ಲಿನ ಅಂಗಡಿಗೆ ತೆರಳಿ ಸ್ವಚ್ಚತೆ ಬಗ್ಗೆ ಅರಿವು ಮೂಡಿದರು.


ದೇವಾಲಯ ಸಮಿತಿ ಮಾಜಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ, ಇಸ್ಮಾಯಿಲ್, ಕರಿಕೆ ರಾಮನಾಥ್, ಲವಚಿಣ್ಣಪ್ಪ, ಕೋಳಿಬೈಲು ವೆಂಕಟೇಶ್, ಸುನಿಲ್ ಪತ್ರವೋ, ಇಸ್ಮಾಯಿಲ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಪ್ರಾಂಶುಪಾಲ ಲೋಕೇಶ್, ಎಸ್‌ಡಿಎಂಸಿ ಅಧ್ಯಕ್ಷ ಉಸ್ಮಾನ್, ಹೊಸೂರು ಸೂರಜ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net