ಅಧಿಕಾರಿಗಳಿಗೆ ಪೊನ್ನಣ್ಣ ಖಡಕ್ ಸೂಚನೆ

Ponnanna Khadak notice to officials
Published on

ಮಡಿಕೇರಿ:

ಸಾರ್ವಜನಿಕರು ದೂರವಾಣಿ ಕರೆ ಮಾಡಿದಾಗ ಅವರಿಗೆ ಸ್ಪಂದಿಸುವ ಗುಣವನ್ನು ರೂಢಿಸಿಕೊಳ್ಳಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆಗಿರುವ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿರಾಜಪೇಟೆ ಮತ್ತು ಮಡಿಕೇರಿ ತಾಲ್ಲೂಕಿನಾದ್ಯಂತ ಸೋಮವಾರ ಅಧಿಕಾರಿಗಳೊಂದಿಗೆ ಮಳೆಹಾನಿ ಪ್ರದೇಶ ವೀಕ್ಷಣೆ ಮಾಡಿ ಎಮ್ಮೆಮಾಡು ಪಂಚಾಯತ್ ನಲ್ಲಿ ಸಭೆ ನಡೆಸಿ ಮಾತನಾಡಿದರು.

ಅಧಿಕಾರಿಗಳು ತಮ್ಮ ದೂರವಾಣಿ ಕರೆ ಸ್ವೀಕರಿಸುವುದಿಲ್ಲ ಎಂದು ನಾಗರಿಕರು ಅಳಲು ತೋಡಿಕೊಂಡಾಗ ಅಸಮಾಧಾನ ಗೊಂಡ ಪೊನ್ನಣ್ಣ ಮಳೆಗಾಳಿಗೆ ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ವಿದ್ಯುತ್, ಮತ್ತು ನೀರಿನ ವ್ಯವಸ್ಥೆ ಸಹಜವಾಗಿ ಹದಗೆಡುತ್ತದೆ. ಈ ಸಂಧರ್ಭದಲ್ಲಿ ಜನರಿಗೆ ಸ್ಪಂದಿಸುವAತಾಗಬೇಕು. ಅಧಿಕಾರಿ, ಸಿಬ್ಬಂದಿಗಳಿಗೆ ಕರೆ ಮಾಡುತ್ತಾರೆ. ಅಂತಹ ಸಂದರ್ಭದಲ್ಲಿ ಕರೆಯನ್ನು ಸ್ವೀಕರಿಸುವ ಸೌಜನ್ಯ ವಿಲ್ಲದಿದ್ದರೆ ಹೇಗೆ ಎಂದು ಪ್ರಶ್ನಿಸಿದರು.
ಅತಿ ಗಾಳಿಯಿಂದ ಜಿಲ್ಲೆಯಲ್ಲಿ 2318 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಇವುಗಳನ್ನು ತ್ವರಿತವಾಗಿ ಸರಿಪಡಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದರು.

ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿರುವ ರಸ್ತೆಗಳ ಬಗ್ಗೆ ಸಂಪೂರ್ಣ ವರದಿ ಪಡೆದಿದ್ದು ಎಲ್ಲವನ್ನು ಸರಿಪಡಿಸಲು ಬದ್ದರಿದ್ದೇನೆ ಎಂದರು. 2018 ಆಗಸ್ಟ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಆದ ಅನಾಹುತದ ಬಗ್ಗೆ ಸ್ಮರಿಸಿದ ಪೊನ್ನಣ್ಣ ಆಗಸ್ಟ್ ನಲ್ಲಿ ಮಳೆಯಿಂದ ಆಗುವ ಅನಾಹುತಗಳನ್ನು ತಡೆಯಲು ಅಧಿಕಾರಿಗಳ ಜತೆಗೆ ಎಲ್ಲಾ ನಾಗರಿಕರು ಸಜ್ಜಾಗಿರಲು ಕರೆ ನೀಡಿದರು.

ಮಡಿಕೇರಿ ತಹಸೀಲ್ದಾರ್ ಪ್ರವೀಣ್ ಕುಮಾರ್, ಸೆಸ್ಕ್ ಮತ್ತು ಪಿಡಬ್ಲೂö್ಯಡಿ ಎಂಜಿನಿಯರ್‌ಗಳು, ಕಂದಾಯ ಅಧಿಕಾರಿಗಳು, ಗ್ಯಾರೆಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪ್ರಮುಖರಾದ ಇಸ್ಮಾಯಿಲ್, ತೆನ್ನಿರ ಮೈನ, ಹೊಸೂರು ಸೂರಜ್,ಕೆಡಿಪಿ ಸದಸ್ಯರಾದ ಬಾಚಿಮಂಡ ಲವ ಚಿಣ್ಣಪ್ಪ, ಹಂಸ, ಐಸಮ್ಮ, ಇಸ್ಮಾಯಿಲ್, ಗಫೂರ್ , ಯೂಸುಫ್ ಸೇರಿದಂತೆ ಗ್ರಾಮಸ್ಥರು, ಪ್ರಮುಖರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net