

ಮದ್ದೂರು: ಪಟ್ಟಣದ ಕೋಟೆಬೀದಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಕೋಟೆ ಮಾರಮ್ಮ ದೇವಸ್ಥಾನದಲ್ಲಿ ಮಂಗಳವಾರ ಮಾರಮ್ಮನ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು.
ಮುಂಜಾನೆಯಿಂದಲೇ ದೇವರಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಬಳಿಕ ಭಕ್ತರಿಗೆ ತೀರ್ಥ, ಪ್ರಸಾದ ವಿತರಣೆ ಮಾಡಲಾಯಿತು. ಹಬ್ಬದ ಅಂಗವಾಗಿ ದೇವರನ್ನು ವಿಶೇಷವಾಗಿ ಹೂವಿನಿಂದ ಅಲಂಕಾರ ಮಾಡಲಾಗಿತ್ತು.
ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಿಂದ ಭಕ್ತರು ಮಕ್ಕಳೊಂದಿಗೆ ದೇಗುಲಕ್ಕೆ ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ತಂಬಿಟ್ಟಿನಾರತಿ ಮಾಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇಗುಲಕ್ಕೆ ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಹಬ್ಬದ ಅಂಗವಾಗಿ ದೇಗುಲವನ್ನು ವಿದ್ಯುತ್ ದೀಪಗಳಿಂದ ಅಂಲಕಾರ ಮಾಡಲಾಗಿತ್ತು.