ಉತ್ತರಾಭಿಮುಖದ ದ್ವಾರದದಲ್ಲಿ ದೇವರ ದರ್ಶನ

Dbp4
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ

ತಾಲೂಕಿನಲ್ಲಿ ವೆಂಕಟರಮಣಸ್ವಾಮಿ, ರಂಗನಾಥಸ್ವಾಮಿ, ವೇಣುಗೋಪಾಲ ಸ್ವಾಮಿ ದೇವಾಲಯಗಳಲ್ಲಿ  ಉತ್ತರಾಭಿಮುಖದ ವೈಕುಂಠ ದ್ವಾರದ ಮೂಲಕ ಜನ ದೇವರ ದರ್ಶನ ಪಡೆದರು.

ತೇರಿನಬೀದಿಯ ಶ್ರೀಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜೆ ಹಮ್ಮಿಕೊಳ್ಳಲಾಗಿತ್ತು. ತಹಸೀಲ್ದಾರ್ ವಿಭಾವಿದ್ಯಾ ರಾಠೋಡ್, ಶಾಸಕ ಧೀರಜ್ ಮುನಿರಾಜು ಭೇಟಿ ದೇವರ ದರ್ಶನ ಪಡೆದರು. ಕೆರೆಬಾಗಿಲು ರಸ್ತೆಯಲ್ಲಿರುವ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ವಿಶೇಷ ಅಲಂಕಾರ, ನಗರದ ಕುಚ್ಚಪ್ಪನಪೇಟೆಯಲ್ಲಿರುವ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯ ರಂಗಪ್ಪ ಸರ್ಕಲ್ ಸಮೀಪದ ಶಿರಡಿ ಸಾಯಿಬಾಬಾ ಮಂದಿರದಲ್ಲಿ, ನಗರದ ವೆಂಕಟರಮಣಸ್ವಾಮಿ, ಜನಾರ್ಧನಸ್ವಾಮಿ, ನರಸಿಂಹಸ್ವಾಮಿ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮ ಜರುಗಿದವು. ತಾಲೂಕಿನ ವಡ್ಡರಹಳ್ಳಿ, ಸಾಸಲು, ಗುಟ್ಟೆ ಲಕ್ಷ್ಮೀ ನರಸಿಂಹಸ್ವಾಮಿ ಗ್ರಾಮದಲ್ಲಿರುವ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net