

ಮದ್ದೂರು: ನವರಾತ್ರಿ ಹಿನ್ನೆಲೆಯಲ್ಲಿ ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಶನಿವಾರ ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಮದ್ದೂರಮ್ಮ, ಕಾಶಿ ವಿಶ್ವೇಶ್ವರ ಸ್ವಾಮಿ, ಎಲ್ಲಮ್ಮ ತಾಯಿ, ತಾಲೂಕಿನ ಕೊಪ್ಪ ಗ್ರಾಮದ ಶ್ರೀ ಪಟ್ಟಲದಮ್ಮ, ಕೌಡ್ಲೆ ಗ್ರಾಮದ ಪಟ್ಟಲದಮ್ಮ ಸೇರಿದಂತೆ ಹಲವಾರು ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಂಡು ಭಕ್ತರಿಗೆ ತೀರ್ಥ, ಪ್ರಸಾದ ವಿನಿಯೋಗಿಸಲಾಯಿತು.