ಗುರುಪೂರ್ಣಿಮೆ ಅಂಗವಾಗಿ ಕಾವೇರಿ ಮಾತೆಗೆ ಪೂಜೆ

pooje
Published on

ಕುಶಾಲನಗರ:

ಪಟ್ಟಣದ ಟೋಲ್ ಗೇಟ್ ಬಳಿ ಇರುವ ಕಾವೇರಿ ಪ್ರತಿಮೆಗೆ ಗುರುಪೂರ್ಣಿಮೆ ಅಂಗವಾಗಿ ಗುರುವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ಬಾರವಿ ಕನ್ನಡ ಅಭಿಮಾನಿಗಳ ಸಂಘದ ವತಿಯಿಂದ ಏರ್ಪಡಿಸಿದ್ದ ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ಗಡಿಭಾಗದ ಕಾವೇರಿ ದೇಗುಲದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ಪೂಜಾ ಕಾರ್ಯಕ್ರಮ ನಡೆಯಿತು. ಕಾವೇರಿ ಪ್ರತಿಮೆಗೆ ಹಾಲು, ತುಪ್ಪ, ಅರಿಸಿನ, ಕುಂಕುಮಗಳಿAದ ಅಭಿಷೇಕ ಮಾಡಲಾಯಿತು.

ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ನೆರವೇರಿಸಲಾಯಿತು. ಉದ್ಯಮಿ ರಾಜು ಹಾಗೂ ಸುಜಾತ ಕುಟುಂಬಸ್ಥರು ಪೂಜಾ ಸೇವಾರ್ಥ ನೆರವೇರಿಸಿದರು.

ರಾಜಣ್ಣ, ಸರಸ್ವತಿ ಕುಟುಂಬಸ್ಥರು ಕಾವೇರಿ ಮಾತೆಗೆ ವಸ್ತ್ರ ವಿತರಿಸಿದರು.

ಈ ವೇಳೆ ಮಾತನಾಡಿದ ಉದ್ಯಮಿ ಮಹಾಲಿಂಗಸ್ವಾಮಿ, ಕಾವೇರಿ ನದಿಯ ಪಾವಿತ್ರ‍್ಯತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಪ್ರಕೃತಿಯನ್ನು ಆರಾಧಿಸುವುದರೊಂದಿಗೆ ಬೆಳೆಸಿ, ಉಳಿಸಿದಲ್ಲಿ ಮಾತ್ರ ಪರಿಸರದ ಸಮತೋಲನ ಕಾಪಾಡಲು ಸಾಧ್ಯ. ಈ ನಿಟ್ಟಿನಲ್ಲಿ ಜೀವನದಿ ಕಾವೇರಿ ಮತ್ತು ಪರಿಸರದ ಉಳಿವಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ. ಕಾವೇರಿ ನದಿಯ ಸ್ವಚ್ಛತೆ ಹಾಗೂ ಸಂರಕ್ಷಣೆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಹಕರಿಸಿ ಸ್ವಚ್ಛ ಪರಿಸರದ ಉಳಿವಿಗೆ ಸಹಕರಿಸುವಂತೆ ಹೇಳಿದರು.

ಈ ಸಂದರ್ಭ ಬಾರವಿ ಕನ್ನಡ ಅಭಿಮಾನಿ ಸಂಘದ ಪ್ರಮುಖರಾದ ಬಬೀಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್, ರವೀಂದ್ರ ಪ್ರಸಾದ್, ಮುಖಂಡರಾದ ಚಂದ್ರು, ಸೋಮಶೇಖರ್, ರುದ್ರ, ಮಂಜು, ಗಿರೀಶ್, ಕಾವಲು ಪಡೆ ಜಿಲ್ಲಾಧ್ಯಕ್ಷ ಕೃಷ್ಣ, ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ನAತರ ನೆರೆದಿದ್ದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net