

ಕುಶಾಲನಗರ:
ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀಗೆಹೊಸೂರು ಸಮೀಪದ ಜೇನುಕಲ್ಲು ಬೆಟ್ಟ ಗ್ರಾಮದಲ್ಲಿರುವ ಶ್ರೀ ಉದ್ಭವ ಬಸವೇಶ್ವರ ದೇವಾಲಯದ ಆವರಣದಲ್ಲಿ ಬಸವ ಜಯಂತಿ ಅಂಗವಾಗಿ ಬುಧವಾರ ಬಸವೇಶ್ವರ ಪೂಜ್ಯೋತ್ಸವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು.
ಬಸವೇಶ್ವರ ಪೂಜ್ಯೋತ್ಸವದ ಅಂಗವಾಗಿ ಉದ್ಭವ ಬಸವೇಶ್ವರ ದೇವರಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ದೇವರಾಜ್ ನೆರವೇರಿಸಿದರು. ಪೂಜಾ ಕಾರ್ಯಕ್ರಮದಲ್ಲಿ ಸೀಗೆಹೊಸೂರು ಮದಲಾಪುರ, ಜೇನುಕಲ್ಲು ಬೆಟ್ಟ ವ್ಯಾಪ್ತಿಯ ನೂರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಹೆಚ್.ಟಿ. ನಾಗೇಶ್, ಕಾರ್ಯದರ್ಶಿ ಹೆಚ್.ಟಿ. ಬಸವರಾಜ್, ಉಪಾಧ್ಯಕ್ಷ ಯೋಗನಂದ, ಗ್ರಾಮ ಪಂಚಾಯತಿ ಸದಸ್ಯೆ ಜಯಶೀಲಾ, ಸಮಿತಿ ನಿರ್ದೇಶಕರು, ಸದಸ್ಯರು, ಗ್ರಾಮಸ್ಥರು ಇದ್ದರು.