

ವಿಜಯವಾಣಿ ಸುದ್ದಿಜಾಲ ಧಾರವಾಡ
ತಾಲೂಕಿನ ಮುರಕಟ್ಟಿ ಗ್ರಾಮದಲ್ಲಿ ಸರ್ಕಾರದ ನಿಯಮಾವಳಿಯನ್ನು ಗಾಳಿಗೆ ತೂರಿ ಜಲಜೀವನ್ ಮಿಷನ್ ಕಾಮಗಾರಿ ಮಾಡಲಾಗಿದೆ. ಪಿಡಿಒ ಹಾಗೂ ಇಲಾಖೆಯ ಅಽಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಕಳಪೆ ಕಾಮಗಾರಿ ಮಾಡಿದ್ದಾರೆ. ಯೋಜನೆಯ ಬಿಲ್ ತಡೆಹಿಡಿಯಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ ಘಾಟಿನ ಆಗ್ರಹಿಸಿದ್ದಾರೆ.
ಈ ಕುರಿತು ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ. ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.
ಮುರಕಟ್ಟಿ ಮತ್ತು ಮಲ್ಲೂರ ಗ್ರಾಮ ಸೇರಿ 90 ಲಕ್ಷ ರೂಪಾಯಿ ವೆಚ್ಚದ ಜೆಜೆಎಂ ಕಾಮಗಾರಿ ಕೈಗೊಳ್ಳಲಾಗಿದೆ. ಅಂದಾಜು ಪತ್ರಿಕೆಯಲ್ಲಿ ಷರತ್ತುಗಳನ್ನು ಉಲ್ಲಂಘಿಸಲಾಗಿದೆ. ಕಾಮಗಾರಿಗೆ ಕಳಪೆ ಸಲಕರಣೆಗಳನ್ನು ಬಳಸಲಾಗಿದೆ. ಈ ಕುರಿತು ಆಗಸ್ಟ್ನಲ್ಲೇ ಪಿಡಿಒಗೆ ತಕರಾರು ಕೊಟ್ಟಿದ್ದರೂ ಸ್ಪಂದಿಸಿಲ್ಲ. ಅಽಕಾರಿಗಳು, ಗುತ್ತಿಗೆದಾರ ಶಾಮೀಲಾಗಿ ನ. 7ರಂದು ಹಸ್ತಾಂತರ ಪತ್ರ ನೀಡಿದ್ದಾರೆ. ಈ ಕುರಿತು ಸ್ಥಳ ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಅಲ್ಲಿಯವರೆಗೆ ಬಿಲ್ ತಡೆಹಿಡಿಯಬೇಕು ಎಂದು ನಾಗರಾಜ ಘಾಟಿನ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಸಿಇಒ ಮುಖ್ಯ ಕಾರ್ಯನಿರ್ವಾಹಕ ಅಽಕಾರಿಗಳು ಸ್ಪಂದಿಸದಿದ್ದರೆ ಕಳಪೆ ಕಾಮಗಾರಿ ಕುರಿತು ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ನಾಗರಾಜ `ವಿಜಯವಾಣಿ'ಗೆ ಪ್ರತಿಕ್ರಿಯಿಸಿದರು.