ಪೂರ್ಣಿಮಾ ಪ್ರಭು ರಾಜ್ಯಮಟ್ಟಕ್ಕೆ ಆಯ್ಕೆ

blm
Published on

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಹೆಮ್ಮಾಡಿ ಜನತಾ ಪಪೂ ಕಾಲೇಜು ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪೂರ್ಣಿಮಾ ಪ್ರಭು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇದೇ ಪಂದ್ಯಾಟದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ದಿಶಾ ಡಿಮೆಲ್ಲೊ ದ್ವಿತೀಯ, ಡೇನಿಕಾ ಕುಂದರ್ ತೃತೀಯ, ದ್ವಿತೀಯ ವಾಣಿಜ್ಯ ವಿಭಾಗದ ಅಪೂರ್ವಾ ತೃತೀಯ, ಪ್ರಥಮ ವಾಣಿಜ್ಯ ವಿಭಾಗದ ಸಾಚಿ ಶೆಟ್ಟಿ ತೃತೀಯ ಸ್ಥಾನ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net