

ರಾಣೆಬೆನ್ನೂರ: ಪಿಒಪಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಜೈನ್ ಮಂದಿರ ಬಳಿ ನಡೆದಿದೆ.
ಉತ್ತರ ಪ್ರದೇಶದ ಮನೋಚೌವ್ಹಾಣ ಲಕ್ಷಿ$್ಮರಾಮ (27) ಮೃತ ವ್ಯಕ್ತಿ.
ಈತ ಯಾವುದೋ ಕಾರಣಕ್ಕೆ ಮನಸ್ಸಿಗೆ ಬೇಸರ ಮಾಡಿಕೊಂಡು ಮಂದಿರದ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ