ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಥಸಂಚಲನ

police rounds
Trajectory
Published on

ದೊಡ್ಡಬಳ್ಳಾಪುರ: ಗೌರಿ-ಗಣೇಶ ಹಬ್ಬದ ಅಂಗವಾಗಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು.
ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಭಕ್ತಿಪೂರ್ವಕವಾಗಿ ಆಚರಿಸುವ ನಿಟ್ಟಿನಲ್ಲಿ ಈ ವಿಶೇಷ ಪಥ ಸಂಚಲ ಆಯೋಜನೆ ಮಾಡಲಾಗಿತ್ತು. ನೆಲದಾಂಜನೇಯಸ್ವಾಮಿ ದೇಗುಲದಿಂದ ಆರಂಭವಾದ ಪಥಸಂಚಲನ ಹಳೇ ಬಸ್ ನಿಲ್ದಾಣ, ಚೌಕ, ತಾಲೂಕು ಕಚೇರಿ ವೃತ್ತ, ಇಸ್ಲಾಂಪುರ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಮೂಲಕ ಸಾಗಿ ಮುಕ್ತಾಯಗೊಂಡಿತು.
ಪೊಲೀಸರ ಮೇಲೆ ನಂಬಿಕೆ, ವಿಶ್ವಾಸ, ಜನಸ್ನೇಹಿಯಾಗಿಸಲು ಪಥಸಂಚಲನ ಸಹಕಾರಿಯಾಗಿದೆ. ಗಣೇಶ ವಿಸರ್ಜನೆ ವೇಳೆಯೂ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗುವುದು ಎಂದು ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net