

ರೋಣ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಜನತೆ ರಾಜ್ಯ ಸರ್ಕಾರದ ಮೇಲೆ ಇಟ್ಟ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ರಾಜ್ಯದ ಜನತೆ ಗೆಲುವಿನ ಮೂಲಕ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಪುರಸಭೆ ಮಾಜಿ ಉಪಾಧ್ಯಕ್ಷ ಮಿಥುನ ಪಾಟೀಲ ಹೇಳಿದರು.
ಪಟ್ಟಣದ ಸೂಡಿ ವೃತ್ತದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು.
ಈ ಗೆಲುವು ವಿರೋಧ ಪಕ್ಷಗಳಿಗೆ ತಕ್ಕ ಪಾಠವಾಗಿದೆ. ಜನಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವುದನ್ನು ಬಿಡಬೇಕು. ಪಂಚ ಗ್ಯಾರಂಟಿ ಯೋಜನೆಗಳು ಜನರ ಹೃದಯ ಗೆದ್ದಿವೆ ಎಂದರು.
ಪುರಸಭೆ ಅಧ್ಯಕ್ಷೆ ಗೀತಾ ಮಾಡಲಗೇರಿ, ಉಪಾಧ್ಯಕ್ಷ ದುರಗಪ್ಪ ಹಿರೇಮನಿ, ವಿ.ಬಿ. ಸೋಮನಕಟ್ಟಿಮಠ, ಬಸವರಾಜ ನವಲಗುಂದ ಬಸವರಾಜ ಜಗ್ಗಲ, ಸಂಗಪ್ಪ ಜಿಡ್ಡಿಬಾಗಿಲ, ಸಂಜಯ ದೊಡ್ಡಮನಿ, ನಾಜಬೇಗಂ ಯಲಿಗಾರ, ಆನಂದ ಚಂಗಳಿ, ಸಂಜು ರೆಡ್ಡೆರ, ಆಸ್ಲಂ ಕೊಪ್ಪಳ, ಮಲ್ಲು ರಾಯನಗೌಡ್ರ, ಶಿವಪ್ಪ ಹುಲ್ಲೂರ, ಇತರರಿದ್ದರು.