ಜನಪರ ಪ್ರೀಮಿಯರ್ ಲೀಗ್ ಇಂದಿನಿಂದ

ಜನಪರ ಪ್ರೀಮಿಯರ್ ಲೀಗ್ ಇಂದಿನಿಂದ
Published on

ಸಿದ್ದಾಪುರ; ಜನಪರ ಕ್ರೀಡಾ ಮತ್ತು ಕಲಾ ಯುವ ಜನ ಸಂಘ ಮಾಲ್ದಾರೆ ಇವರ ವತಿಯಿಂದ ಜನಪರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಮಾಲ್ದಾರೆ ಪ್ರೌಢಶಾಲಾ ಮೈದಾನದಲ್ಲಿ ಮೇ 19 ಹಾಗೂ 20ರಂದು ನಡೆಯಲಿದೆ.

ಸಂಘವು ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದು, ಕೋವಿಡ್ ಸಂದರ್ಭದಲ್ಲಿ ಸಂಘಟನೆ ವತಿಯಿಂದ ಸಹಾಯ, ಆರೋಗ್ಯ ತಪಾಸಣೆ ಶಿಬಿರ, ಕ್ರೀಡೆ, ಸ್ವಚ್ಛತೆ, ಪರಿಸರ ಸಂರಕ್ಷಣೆ, ಮುಂತಾದ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ. ಜಿಲ್ಲೆಯಲ್ಲಿ 2017ನೇ ಹಾಗೂ 2019ನೇ ಸಾಲಿನಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮ ಅಡಿಯಲ್ಲಿ ಸಂಘಟನೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು. ಇದೀಗ ಈ ವರ್ಷ ಪಾಲಿಬೆಟ್ಟ, ಚೆನ್ನಯ್ಯನ ಕೋಟೆ, ಮಾಲ್ದಾರೆ, ಗ್ರಾಮ ಪಂಚಾಯಿತಿಯ ಆಟಗಾರರಿಗೆ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯ ಆಯೋಜಿಸಲಾಗಿದ್ದು, ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಜನಪ್ರತಿನಿಧಿಗಳು, ಸಮಾಜ ಸೇವಕರು, ದಾನಿಗಳು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಉದ್ಘಾಟನಾ ಪಂದ್ಯ: ಸೋಮವಾರ ಉದ್ಘಾಟನಾ ಪಂದ್ಯ ವಿರಾಜಪೇಟೆ ತಾಲೂಕು ಪತ್ರಕರ್ತರ ಸಂಘ ಹಾಗೂ ಸಿದ್ದಾಪುರ ಪೊಲೀಸರ ನಡುವೆ ನಡೆಯಲಿದೆ ಲೀಗ್‌ನಲ್ಲಿ ಟ್ರೋಫಿಗಾಗಿ ಹತ್ತು ತಂಡಗಳ ನಡುವೆ ಹಣಾಹಣಿ ನಡೆಯಲಿದೆ. ಗ್ರಾಮದ 100ಕ್ಕೂ ಹೆಚ್ಚು ಕ್ರಿಕೆಟಿಗರು ಈ ಪಂದ್ಯಾಟ ಭಾಗವಹಿಸಲಿದ್ದಾರೆ

ವಿಜೇತ ತಂಡಕ್ಕೆ ಪ್ರಥಮ ಬಹುಮಾನ 25ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನ ಹದಿನೈದು ಸಾವಿರ ನಗದು ಹಾಗೂ ಟ್ರೋಫಿಯನ್ನ ನೀಡಲಾಗುವುದು. ಪಂದ್ಯಾವಳಿಯಲ್ಲಿ ಅತ್ಯುತ್ತಮ ಕ್ರೀಡಾಪಟುಗಳನ್ನು ಗುರುತಿಸಿ ಪ್ರತಿ ಪಂದ್ಯಾಟಕ್ಕೆ ಮ್ಯಾನ್ ಆಪ್‌ದಿಮ್ಯಾಚ್, ಮ್ಯಾನ್‌ಆಪ್‌ದಿ ಸೀರಿಸ್ (ಪಂದ್ಯ ಶ್ರೇಷ್ಠ), ಫೈನಲ್ ಪಂದ್ಯಾಟಕ್ಕೆ ಪಂದ್ಯ ಪುರುಷೋತ್ತಮ ಬಹುಮಾನ ನೀಡಲಾಗುತ್ತದೆ. ಗ್ರಾಮೀಣ ಕ್ರೀಡಾಪಟುಗಳನ್ನು ಉತ್ತೇಜಿಸಲು ಕಳೆದ ಒಬತ್ತು ವರ್ಷಗಳಿಂದ ಕ್ರೀಡಾಕೂಟಗಳನ್ನಾಗಿ ಮಾಡಿಕೊಂಡು ಬರಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಭಾವ ಮಾಲ್ದಾರೆ ತಿಳಿಸಿದರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net